ಭದ್ರಾವತಿ ತಾಲೂಕಿನ ನಾಗತಿಬೆಳಗಲು ವಲಯದ ಶ್ರೀ ರಾಮೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ 1752ನೇ ಮದ್ಯವರ್ಜನ ಶಿಬಿರದ ಉದ್ಘಾಟನೆಯನ್ನು ಶ್ರೀ.ಶ್ರೀಶೈಲ ಕುಮಾರ್ ಪೊಲೀಸ್ ವೃತ್ತ ನಿರೀಕ್ಷಕರು ಭದ್ರಾವತಿ ದೀಪ ಬೆಳಗಿಸುವುದರ ಮೂಲಕ ಶಿಬಿರಾರ್ಥಿಗಳಿಗೆ ಶುಭ ಹಾರೈಕೆ ಮಾಡಿರುತ್ತಾರೆ. ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ನಾಗರಾಜ್ ಕುಲಾಲ್ ಪ್ರಾಸ್ತವಿಕವಾಗಿ ಮಾತನಾಡಿರುತ್ತಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಚಂದ್ರಶೇಖರ್ ಜೆ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇ.ಧ.ಗ್ರಾ.ಯೋ ಬಿ.ಸಿ, ಟ್ರಸ್ಟ್ (ರಿ.) ಶಿವಮೊಗ್ಗ, ಯಂ ಎಲ್.ಯಶೋಧರಯ್ಯ, ಅಧ್ಯಕ್ಷರು 1752ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ, ಶ್ರೀ.ಎಸ್ ಎಮ್. ರಮೇಶ್ ಮುಖಂಡರು ಶ್ರೀ ರಾಮನಗರ, ಶ್ರೀ.ಪಿ.ರಂಗಸ್ವಾಮಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ವೀರಾಪುರ, ಶ್ರೀ ಆರ್ ಕರುಣಾಮೂರ್ತಿ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಶಿವಮೊಗ್ಗ, ಶ್ರೀ ಜಯರಾಮ ಗೊಂದಿ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಶಿವಮೊಗ್ಗ, ಶ್ರೀಮತಿ ಪಿ.ಪಾರ್ವತಮ್ಮ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಶಿವಮೊಗ್ಗ, ಶ್ರೀ ಆನಂದ.ಜಿ.ನಿಕಟಪೂರ್ವ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಶಿವಮೊಗ್ಗ, ಭದ್ರಾವತಿ ತಾಲೂಕಿನ ಯೋಜನಾಧಿಕಾರಿ ಮಾಧವ, ತಾಲೂಕಿನ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಜ್ಞಾನವಿಕಾಸ ಸಮನ್ವಯಧಿಕಾರಿ, ನವಜೀವನ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
