ಭದ್ರಾವತಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ

Janajagurthi Vedike News

ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ಭದ್ರಾವತಿಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಶಿವಕುಮಾರ್ ವಕೀಲರು ವಿದ್ಯಾರ್ಥಿಗಳಿಗೆ ದುಶ್ಚಟ ಹಾಗೂ ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಇದಕ್ಕೆ ಸಂಬಂಧಪಟ್ಟು ಕಾನೂನಿನಲ್ಲಿ ಆಗುವ ಶಿಕ್ಷೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀ ಕರುಣ ಮೂರ್ತಿ,ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ್, ಯೋಜನಾಧಿಕಾರಿಯಾದ ಪ್ರಕಾಶ್ ನಾಯಕ್ ವೈ., 250 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.