ಮಂಗಳೂರು ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಗಾಂಧಿಸ್ಮೃತಿ, ಜನಜಾಗೃತಿ ಸಮಾವೇಶ ಮತ್ತು ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಮಂಗಳೂರು, ಬಜಪೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮಂಗಳೂರು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಜಪ್ಪಿನಮೊಗರು ವಲಯ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಗಾಂಧಿಸ್ಮೃತಿ. ಜನಜಾಗ್ರತಿ ಸಮಾವೇಶ ಮತ್ತು ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮವನ್ನು ಮಂಗಳೂರು ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ವೇದವ್ಯಾಸ ಕಾಮತ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಧರ್ಮಸ್ಥಳ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ
ಡಾ| ಎಲ್ ಎಚ್ ಮಂಜುನಾಥ್ ಇವರು ಆಶಯ ಭಾಷಣ ನುಡಿದರು.