ಮಂಜೇಶ್ವರ ತಾಲೂಕಿನ ಇಡಿಯಡ್ಕದಲ್ಲಿ 1801 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಮಂಜೇಶ್ವರ ತಾಲೂಕಿನ ಪೆರ್ಲ ವಲಯದ ಕಾಸರಗೋಡು ಪೆರ್ಲ ಶ್ರೀ ದುರ್ಗಾಪರಮೇಶ್ವರಿ ಉಲ್ಲಾಳ್ತಿ ದೇವಸ್ಥಾನದ ಸಭಾಭವನದಲ್ಲಿ ನಡೆದ 1801 ನೇ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ವಿವೇಕ್ ವಿನ್ಸೆಂಟ್ ಪಾಯಸ್ ರವರು ನೆರವೇರಿಸಿ ಕೊಟ್ಟರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಸದಾನಂದ ಕುಧ್ವ, ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಅಶ್ವಥ್ ಪೂಜಾರಿ ಲಾಲ್ ಬಾಗ್, ಜನಜಾಗೃತಿ ವೇದಿಕೆಯ ಮಂಜೇಶ್ವರ ತಾಲೂಕಿನ ಅಧ್ಯಕ್ಷರಾದ ಡಾಕ್ಟರ್ ಜಯಪ್ರಕಾಶ್ ನಾರಾಯಣ ತೊಟ್ಟಿತ್ತೋಡಿ, ಕಾಸರಗೋಡು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಅಖಿಲೇಶ್ ನಗುಮೊಗಂ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ 2 ಜಿಲ್ಲೆಯ ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್, ಮಂಜೇಶ್ವರ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಮತಿ ಶಶಿಕಲಾ ಸುವರ್ಣ, ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ, ಜನಜಾಗೃತಿ ಪೆರ್ಲ ವಲಯದ ಅಧ್ಯಕ್ಷರಾದ ಬಿ. ಪಿ. ಶೇಣಿ, ಒಕ್ಕೂಟದ ವಲಯ ಅಧ್ಯಕ್ಷರಾದ ಶ್ರೀ ಶ್ರೀಧರ್ ಮಣಿಯಾಣಿ, ವಲಯ ಮೇಲ್ವಿಚಾರಕರಾದ ಜಯಶ್ರೀ, ಶಿವರಾಧಿಕಾರಿ ದೇವಿ ಪ್ರಸಾದ್, ಆರೋಗ್ಯ ಕಾರ್ಯಕರ್ತರಾದ ಶ್ರೀಮತಿ ನೇತ್ರಾವತಿ ಉಪಸ್ಥಿತರಿದ್ದರು.