ಮಂಡ್ಯದ ಮದ್ದೂರಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಆಚರಣೆ ಮತ್ತು ಮಾಹಿತಿ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮಂಡ್ಯ ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ )ಬೆಳ್ತಂಗಡಿ ,ಜಿಲ್ಲಾ ಜನಜಾಗೃತಿ ವೇದಿಕೆ ಮಂಡ್ಯ ,ಪೊಲೀಸ್ ಇಲಾಖೆ ಮದ್ದೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ,ತಾಲೂಕು ಪಂಚಾಯತ್ ಸಭಾಂಗಣ ಮದ್ದೂರು ಇಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಕರಪತ್ರ ಬಿಡುಗಡೆ ಮತ್ತು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಪಿ ಗಂಗಾಧರ ರೈ ನೆರವೇರಿಸಿ ದುಶ್ಚಟ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ ಈ ನೆಲೆಯಲ್ಲಿ ಕಳೆದ 40 ವರ್ಷಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆಯ ವತಿಯಿಂದ ಜನರನ್ನು ಜಾಗೃತರನ್ನಾಗಿ ಸುವ ಕೆಲಸ ಮಾಡಲಾಗುತ್ತಿದೆ ಎಂದರು.ಕರಪತ್ರವನ್ನು ಬಿಡುಗಡೆಗೊಳಿಸಿದ ಮದ್ದೂರಿನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹನುಮಂತ ಕುಮಾರ್ ಎಚ್ ಮಾದಕ ವಸ್ತುಗಳ ಬಳಕೆ ಕಾನೂನುಬಾಹಿರ ಈ ನೆಲೆಯಲ್ಲಿ ಪೊಲೀಸ್ ಇಲಾಖೆ ಸದಾ ಕಾರ್ಯಪ್ರವೃತ್ತ ವಾಗಿ ಕೆಲಸ ನಿರ್ವಹಿಸುತ್ತಿದೆ ಎಂದರು.