ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮಂಡ್ಯ ಜಿಲ್ಲೆಯ ಜಿಲ್ಲಾ ವ್ಯಾಪ್ತಿಯ ಮಂಡ್ಯ, ಹೊಸಹಳ್ಳಿ, ಭಾರತೀನಗರ, ಮದ್ದೂರು, ಮಳವಳ್ಳಿ ಹಾಗೂ ನಾಗಮಂಗಲ ತಾಲೂಕಿನ ನವಜೀವನ ಸಮಿತಿಯ ಪೋಷಕರುಗಳ ತರಬೇತಿ ಕಾರ್ಯಗಾರ ಕಾರ್ಯಕ್ರಮವು ಮಂಡ್ಯ ಜಿಲ್ಲಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ವಿವೇಕ್ ಪಾಯಸ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ನವಜೀವನ ಸಮಿತಿಯ ಪೋಷಕರುಗಳಿಗೆ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವ ಕುರಿತು ಮಾಹಿತಿ ನೀಡಿದರು. ಮದ್ಯವರ್ಜನ ಶಿಬಿರದ ಮೂಲಕ ಪಾನಮುಕ್ತರಾದಂತಹ ಸದಸ್ಯರುಗಳ ಈಗಿನ ಉನ್ನತ ಸ್ಥಿತಿ-ಗತಿಗಳ ಬಗ್ಗೆ ಬಹಳ ಅರ್ಥಪೂರ್ಣವಾಗಿ ವಿವರಿಸದರು. ಕಾರ್ಯಕ್ರಮದಲ್ಲಿ
ಜಿಲ್ಲಾ ನಿರ್ದೇಶಕರಾದ ಶ್ರೀಮತಿ ಚೇತನಾ, ಹೊಸಹಳ್ಳಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ರವಿ, ಜಿಲ್ಲೆಯ MIS ಯೋಜನಾಧಿಕಾರಿಗಳಾದ ಶ್ರೀ ರಾಘವೇಂದ್ರ, ಮೈಸೂರು ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳಾದ ಶ್ರೀ ಮಾಧವ್ ನಾಯಕ್ ಮತ್ತು ಜನಜಾಗೃತಿ ವೇದಿಕೆಯ ಮೇಲ್ವಿಚಾರಕರಾದ ಶ್ರೀ ವಸಂತ್ ಹಾಗೂ 42 ಜನ ಪೋಷಕರು ಉಪಸ್ಥಿತರಿದ್ದರು.
