ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಡಿಕೇರಿ ತಾಲೂಕು ಬೆಟ್ಟಗೇರಿ ವಲಯ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಕೊಡಗು ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಗೌಡ ಸಮಾಜ ಚೇರಂಬಾಣೆ (ರಿ.), ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಟ್ಟಗೇರಿ ವಲಯ, ಗ್ರಾಮ ಪಂಚಾಯತ್ ಬೆಟ್ಟಗೇರಿ, ಗ್ರಾಮ ಪಂಚಾಯತ್ ಬೇಂಗೂರು – ಚೇರಂಬಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ ಚೇರಂಬಾಣೆ, ಆರಕ್ಷಕ ಇಲಾಖೆ ಭಾಗಮಂಡಲ, ನವಜೀವನ ಸಮಿತಿ ಮಡಿಕೇರಿ ತಾಲೂಕು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ ಮಡಿಕೇರಿ ತಾಲೂಕು, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಊರಿನ ದಾನಿಗಳ ಸಹಕಾರದೊಂದಿಗೆ 1855 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಮತ್ತು ಸಮಾರೋಪ ಸಮಾರಂಭ ಕಾರುಗುಂದ ಗೌಡ ಸಮಾಜದಲ್ಲಿ ಜರುಗಿತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ| ರಾಣಿ ಮಾಚಯ್ಯ ಇವರು ಕುಟುಂಬ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಪ್ರಾದೇಶಿಕ ನಿರ್ದೇಶಕರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.)
ಬೆಳ್ತಂಗಡಿ ಇವರು ಕುಟುಂಬ ದಿನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಕೌಟುಂಬಿಕ ಜೀವನದ ಮಹತ್ವವನ್ನು ಬೋಧಿಸಿದರು. ಶ್ರೀ ಬೆಳ್ಯನ ಚಂದ್ರಪ್ರಕಾಶ್ ಅಧ್ಯಕ್ಷರು 1855 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ದಾನಿಗಳನ್ನು, ಸಂಘ ಸಂಸ್ಥೆಗಳನ್ನು ಮತ್ತು ನಿಸ್ವಾರ್ಥ ಸೇವೆ ಸಲ್ಲಿಸಿದವರನ್ನು ಅಭಿನಂದಿಸಿ ಮಾತನಾಡಿ, ನೂತನ ನವಜೀವನ ಸಮಿತಿ ಸದಸ್ಯರುಗಳ ವೈಯಕ್ತಿಕ ಆರ್ಥಿಕ ಬೆಳವಣಿಗೆಯ ಉದ್ದೇಶದಿಂದ ಭಕ್ತಿಯ ಕಾಣಿಕೆ ಹುಂಡಿಯನ್ನು ವಿತರಿಸಿದರು. ಶ್ರೀ ತಳೂರು ಕಿಶೋರ್ ಕುಮಾರ್ ನಿರ್ದೇಶಕರು ಕಾಫೀ ಮಂಡಳಿ ಭಾರತ ಸರ್ಕಾರ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಎಂಟು ದಿನಗಳ ಕಾಲ ಚಿಕಿತ್ಸೆ ಪಡೆದ ಶಿಬಿರಾರ್ಥಿಗಳು ಪಾನಮುಕ್ತರಾದ ತಮ್ಮಿಂದ ಸಧೃಡ ಸಮಾಜ ನಿರ್ಮಾಣವಾಗಲಿ ಎಂದರು. ಶ್ರೀ ಅರುಣ್ ಬಾನಂಗಡ ನಿಕಟಪೂರ್ವ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಕೊಡಗು ಇವರು ಮಾತನಾಡಿ ಮದ್ಯವರ್ಜನ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಶ್ರೀ ಹೊಸೂರು ಜೆ. ಸತೀಶ್ ಕುಮಾರ್ ಇವರು ಮುಖ್ಯ ಅತಿಥಿಗಳಾಗಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪರಮಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ವಿನೂತನ ಕಾರ್ಯಕ್ರಮವೇ ಈ ಮದ್ಯವರ್ಜನ ಶಿಬಿರ. ಸಮಾಜದಲ್ಲಿ ಇದುವರೆಗೂ ಯಾರು ಮಾಡದಿರುವ ವಿಶೇಷವಾದ ಕಾರ್ಯಕ್ರಮವನ್ನು ಜಗತ್ತಿನಲ್ಲಿ ಯಾರಾದರೂ ಮಾಡುವವರಿದ್ದರೆ ಅದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಎಂದರು. ಸಂಸ್ಥೆಯ ಮುಖೇನ ಸಮುದಾಯದ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಶೈಕ್ಷಣಿಕ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ಮತ್ತು ಜನತೆಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ವಿಶಿಷ್ಟ ಮತ್ತು ವಿಭಿನ್ನ ಕಾರ್ಯಕ್ರಮಗಳೆಲ್ಲವು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು. ಅತಿಥಿಗಳಾಗಿ ಶ್ರೀಮತಿ ಲೀಲಾವತಿ ಮಾನ್ಯ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ಕೊಡಗು ಜಿಲ್ಲೆ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು-ಮನ-ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಮದ್ಯಪಾನವೆಂಬುದೊಂದು ಸಮಾಜವನ್ನು ಬಾದಿಸುವ ಮತ್ತು ಜಾಗೃತೆ ತಪ್ಪಿದರೆ ಯಾರನ್ನೂ ಬಿಡದ ಖಾಯಿಲೆ. ಮದ್ಯಪಾನಕ್ಕೆ ಜಾತಿ, ಧರ್ಮ, ಪಕ್ಷ, ಭೇದ ಯಾವುದೂ ಇರುವುದಿಲ್ಲ. ಹಾಗಾಗಿ ಇದೊಂದು ಸರ್ವಧರ್ಮ ಕಾರ್ಯಕ್ರಮ. ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು. ಶ್ರೀ ನಂದಕುಮಾರ್
ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಮತ್ತು ಶ್ರೀಮತಿ ನೇತ್ರಾವತಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವರು ಎಂಟು ದಿನದ ಮದ್ಯವರ್ಜನ ಶಿಬಿರವನ್ನು ನಿರ್ವಹಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಟಿ.ಎಂ. ಅಯ್ಯಪ್ಪ ಗೌರವಾಧ್ಯಕ್ಷರು 1855 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ಧನಂಜಯ್ ಅಗೋಳಿಕಜೆ ಉಪಾಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಕೊಡಗು, ಶ್ರೀ ಮಿಲನ ಮುತ್ತಣ್ಣ ಕೋಶಾಧಿಕಾರಿ 1855 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ಕೊಪ್ಪಡ ಪಳಂಗಪ್ಪ ಕಾಫೀ ಬೆಳೆಗಾರರು, ಶ್ರೀ ತೀರ್ಥಪ್ರಸಾದ್ ನಿರ್ದೇಶಕರು ಗೌಡ ಸಮಾಜ ಚೇರಂಬಾಣೆ (ರಿ.), ನೈಯ್ಯಣಿರ ಹೇಮಲತ ನಿರ್ದೇಶಕರು ಗೌಡ ಸಮಾಜ ಚೇರಂಬಾಣೆ (ರಿ.), ಎಡಿಕೇರಿ ಪ್ರವೀಣ ನಿರ್ದೇಶಕರು ಗೌಡ ಸಮಾಜ ಚೇರಂಬಾಣೆ (ರಿ.), ಮುಕ್ಕಾಟಿ ನಾಣಯ್ಯ ನಿರ್ದೇಶಕರು ಗೌಡ ಸಮಾಜ ಚೇರಂಬಾಣೆ (ರಿ.), ಶ್ರೀ ನಾಪಂಡ ರಾಲಿ ಮಾದಯ್ಯ ಅಧ್ಯಕ್ಷರು ಕೃಷಿ ಪತ್ತಿನ ಸಹಕಾರ ಸಂಘ ಕಾರುಗುಂದ, ಶ್ರೀ ಪೊಡನೊಳನ ದಿನೇಶ್ ಅಧ್ಯಕ್ಷರು ಗ್ರಾಮ ಪಂಚಾಯತ್ ಕುಂದಚೇರಿ, ಶ್ರೀ ಪಟ್ಟಮಾಡ ಡಿ. ಪೊನ್ನಪ್ಪ ಮಾಜಿ ಅಧ್ಯಕ್ಷರು ನಗರ ಸಭೆ ಮಡಿಕೇರಿ, ಬಾಡನ ಲಿಖಿತ ಸದಸ್ಯರು ಗ್ರಾಮ ಪಂಚಾಯತ್ ಬೆಟ್ಟಗೇರಿ, ಪೊಡನೊಳಂಡ ದಿನೇಶ್ ಅಧ್ಯಕ್ಷರು ಅರುಣ ಪದವಿ ಪೂರ್ವ ಕಾಲೇಜು ಚೇರಂಬಾಣೆ, ಶ್ರೀ ಸುಕುಮಾರ್ ಉಪಾಧ್ಯಕ್ಷರು 1855 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ವಸಂತ ಉಪಾಧ್ಯಕ್ಷರು 1855 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ಕಾಳೇರಮ್ಮನ ಪೂವಯ್ಯ ಉಪಾಧ್ಯಕ್ಷರು 1855 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ಕಾಳೇರಮ್ಮನ ಅಯ್ಯಣ್ಣ ಗೌರವ ಸಲಹೆಗಾರರು 1855 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ಪಟ್ಟಡ ಶರತ್ ಕುಮಾರ್ ಗೌರವ ಸಲಹೆಗಾರರು 1855 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀಮತಿ ಉಮಾದೇವಿ ಗೌರವ ಸಲಹೆಗಾರರು 1855 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ಹೊಸೂರು ಕೇಶವ ಗೌರವ ಸಲಹೆಗಾರರು 1855 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ಪಟ್ಟಡ ಸುಗುಣ ಕುಮಾರ್ ಕಾರ್ಯದರ್ಶಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅವಂದೂರು, ಶ್ರೀ ಬೋಪಯ್ಯ ಯೋಗ ಶಿಕ್ಷಕರು ಜ್ಞಾನ ಕೇಂದ್ರ ಚೇರಂಬಾಣೆ, ಶ್ರೀ ಪುರುಷೋತ್ತಮ್ ಎನ್. ಕ್ಷೇತ್ರ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಡಿಕೇರಿ, ಶ್ರೀ ನಿತೇಶ್ ಮೇಲ್ವಿಚಾರಕರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಉಡುಪಿ, ಶ್ರೀಮತಿ ಮೀನಾಕ್ಷಿ ಅಧ್ಯಕ್ಷರು ಕೊಟ್ಟೂರು ಒಕ್ಕೂಟ ಉಪಸ್ಥಿತರಿದ್ದರು. ಶ್ರೀಮತಿ ವಿದ್ಯಾ ಬಿ. ಹೆಚ್. ಜೊತೆ ಕಾರ್ಯದರ್ಶಿ / ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬೆಟ್ಟಗೇರಿ ವಲಯ, ತಾಲೂಕಿನ ಎಲ್ಲಾ ಮೇಲ್ವಿಚಾರಕರುಗಳು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ತಾಲೂಕಿನ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ನವಜೀವನ ಸಮಿತಿ ಸದಸ್ಯರುಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
