ಮಡಿಕೇರಿ ತಾಲೂಕಿನ ಬೆಟ್ಟಗೇರಿ ವಲಯದಲ್ಲಿ 1855 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ

Janajagurthi Vedike News

ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಡಿಕೇರಿ ತಾಲೂಕು ಬೆಟ್ಟಗೇರಿ ವಲಯ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಕೊಡಗು ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಗೌಡ ಸಮಾಜ ಚೇರಂಬಾಣೆ (ರಿ.), ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಟ್ಟಗೇರಿ ವಲಯ, ಗ್ರಾಮ ಪಂಚಾಯತ್ ಬೆಟ್ಟಗೇರಿ, ಗ್ರಾಮ ಪಂಚಾಯತ್ ಬೇಂಗೂರು – ಚೇರಂಬಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ ಚೇರಂಬಾಣೆ, ಆರಕ್ಷಕ ಇಲಾಖೆ ಭಾಗಮಂಡಲ, ನವಜೀವನ ಸಮಿತಿ ಮಡಿಕೇರಿ ತಾಲೂಕು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಮಡಿಕೇರಿ ತಾಲೂಕು, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಊರಿನ ದಾನಿಗಳ ಸಹಕಾರದೊಂದಿಗೆ 1855 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ಗೌಡ ಸಮಾಜ ಕಾರುಗುಂದದಲ್ಲಿ ಜರುಗಿತು. ಶ್ರೀ ನಂದಕುಮಾರ್ ಪಿ. ಪಿ. ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ಕಛೇರಿ ಬೆಳ್ತಂಗಡಿ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತನಾಡಿ ಜನಜಾಗೃತಿ ವೇದಿಕೆ ಆರಂಭ, ಉದ್ದೇಶ, ಮದ್ಯವರ್ಜನ ಶಿಬಿರ ಅನುಷ್ಠಾನ, ರೂಪುರೇಷೆ, ಶಿಬಿರದ ದೈನಂದಿನ ಕಾರ್ಯಕ್ರಮಗಳ ಬಗ್ಗೆ ವಿವರಿಸಿ ಇದೊಂದು ಮನ ಪರಿವರ್ತನೆಯ ಕಾರ್ಯಕ್ರಮ ಎಂದರು. ಶ್ರೀ ಕೊಡಪಾಲು ಗಣಪತಿ ಅಧ್ಯಕ್ಷರು ಗೌಡ ಸಮಾಜ ಚೇರಂಬಾಣೆ (ರಿ.) ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಉದ್ಘಾಟನಾ ಮಾತುಗಳನ್ನಾಡಿದರು. ಶ್ರೀ ಟಿ.ಎಂ ಅಯ್ಯಪ್ಪ ಗೌರವಾಧ್ಯಕ್ಷರು 1855 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಇವರು ಮಾತನಾಡಿ ಮದ್ಯವರ್ಜನ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಶ್ರೀ ಬೆಳ್ಯನ ಚಂದ್ರಪ್ರಕಾಶ್ ಅಧ್ಯಕ್ಷರು 1855 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಇವರು ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ಕೋರಿ ಶುಭ ಹಾರೈಸಿದರು. ಶ್ರೀ ಸನ್ಮಾನ್ಯ ಕೆ.ಜಿ. ಬೋಪಯ್ಯ ಮಾಜಿ ವಿಧಾನ ಸಭಾಧ್ಯಕ್ಷರು ಹಾಗೂ ಮಾಜಿ ಶಾಸಕರು ವಿರಾಜಪೇಟೆ ಕ್ಷೇತ್ರ ಇವರು ಮುಖ್ಯ ಅತಿಥಿಗಳಾಗಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪರಮ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ವಿನೂತನ ಕಾರ್ಯಕ್ರಮವೇ ಈ ಮದ್ಯವರ್ಜನ ಶಿಬಿರ. ಸಮಾಜದಲ್ಲಿ ಇದುವರೆಗೂ ಯಾರು ಮಾಡದಿರುವ ವಿಶೇಷವಾದ ಕಾರ್ಯಕ್ರಮವನ್ನು ಜಗತ್ತಿನಲ್ಲಿ ಯಾರಾದರೂ ಮಾಡುವವರಿದ್ದರೆ ಅದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಎಂದರು. ಸಂಸ್ಥೆಯ ಮುಖೇನ ಸಮುದಾಯದ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಶೈಕ್ಷಣಿಕ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ಮತ್ತು ಜನತೆಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ವಿಶಿಷ್ಟ ಮತ್ತು ವಿಭಿನ್ನ ಕಾರ್ಯಕ್ರಮಗಳೆಲ್ಲವು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು. ಅತಿಥಿಗಳಾಗಿ ಶ್ರೀಮತಿ ಲೀಲಾವತಿ ಮಾನ್ಯ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ಕೊಡಗು ಜಿಲ್ಲೆ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ ಆದ್ದರಿಂದ ಸಾರ್ವಜನಿಕರ ತನು-ಮನ-ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಮದ್ಯಪಾನವೆಂಬುದೊಂದು ಸಮಾಜವನ್ನು ಬಾದಿಸುವ ಮತ್ತು ಜಾಗೃತೆ ತಪ್ಪಿದರೆ ಯಾರನ್ನೂ ಬಿಡದ ಖಾಯಿಲೆ. ಮದ್ಯಪಾನಕ್ಕೆ ಜಾತಿ, ಧರ್ಮ, ಪಕ್ಷ, ಭೇದ ಯಾವುದೂ ಇರುವುದಿಲ್ಲ ಹಾಗಾಗಿ ಇದೊಂದು ಸರ್ವ ಧರ್ಮ ಕಾರ್ಯಕ್ರಮ. ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಎಂ. ಬಿ. ಅಭಿಮನ್ಯು ಕುಮಾರ್ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಕೊಡಗು ಇವರು ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಧನಂಜಯ್ ಅಗೋಳಿಕಜೆ ಉಪಾಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಕೊಡಗು, ಶ್ರೀ ಪುರುಷೋತ್ತಮ್ ಎನ್. ಕ್ಷೇತ್ರ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಡಿಕೇರಿ ತಾಲೂಕು, ಶ್ರೀಮತಿ ಕಮಲ ಉತ್ತಯ್ಯ ಅಧ್ಯಕ್ಷರು ಗ್ರಾಮ ಪಂಚಾಯತ್ ಬೆಟ್ಟಗೇರಿ, ಶ್ರೀಮತಿ ಮಿಲನ್ ಮುತ್ತಣ್ಣ ಅಧ್ಯಕ್ಷರು ಗ್ರಾಮ ಪಂಚಾಯತ್ ಬೇಂಗೂರು – ಚೇರಂಬಾಣೆ, ಶ್ರೀ ಕುಟ್ಟೇಟ್ಟಿರ ಕುಞಪ್ಪ ಮಾಜಿ ಅಧ್ಯಕ್ಷರು ಕೊಡವ ಸಮಾಜ ಚೇರಂಬಾಣೆ (ರಿ.), ಶ್ರೀಮತಿ ಜಯಂತಿ ಅಧ್ಯಕ್ಷರು ಕಾರುಗುಂದ ಒಕ್ಕೂಟ ಹಾಗೂ ಸದಸ್ಯರು ಗ್ರಾಮ ಪಂಚಾಯತ್ ಬೆಟ್ಟಗೇರಿ, ಶ್ರೀ ತೇಜಕುಮಾರ್ ಸದಸ್ಯರು ಗ್ರಾಮ ಪಂಚಾಯತ್ ಮದೆ, ಶ್ರೀ ಪೂವಯ್ಯ ಕೆ. ಪಿ. ಉಪಾಧ್ಯಕ್ಷರು 1855 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ಅಯ್ಯಣ್ಣ ಮಾಜಿ ಸದಸ್ಯರು ಗ್ರಾಮ ಪಂಚಾಯತ್ ಮದೆ, ಶ್ರೀಮತಿ ರಾಣಿ ಮಾಚಯ್ಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು, ಶ್ರೀ ಕೊಡಗನ ತೀರ್ಥಪ್ರಸಾದ್ ನಿರ್ದೇಶಕರು ಗೌಡ ಸಮಾಜ ಚೇರಂಬಾಣೆ (ರಿ.), ಶ್ರೀ ವಸಂತ ಉಪಾಧ್ಯಕ್ಷರು 1855 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ಕಾರ್ಯಪ್ಪ ಎಂ. ಕೆ. ಮಾಜಿ ಅಧ್ಯಕ್ಷರು ಶ್ರೀ ವಿನಾಯಕ ದೇವಸ್ಥಾನ ತೊಂಬತ್ತುಮನೆ, ಶ್ರೀ ಮುಕ್ಕಾಟಿ ನಾಣಯ್ಯ ನಿರ್ದೇಶಕರು ಗೌಡ ಸಮಾಜ ಚೇರಂಬಾಣೆ (ರಿ.) ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದಲ್ಲಿ ಶ್ರೀಮತಿ ನೇತ್ರಾವತಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವರು ಉಪಸ್ಥಿತರಿದ್ದರು. ಶ್ರೀಮತಿ ವಿದ್ಯಾ ಬಿ. ಹೆಚ್. ಜೊತೆ ಕಾರ್ಯದರ್ಶಿ/ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಬೆಟ್ಟಗೇರಿ ವಲಯ, ತಾಲೂಕಿನ ಎಲ್ಲಾ ಮೇಲ್ವಿಚಾರಕರುಗಳು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ತಾಲೂಕಿನ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ನವಜೀವನ ಸಮಿತಿ ಸದಸ್ಯರುಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.