ಮದ್ದೂರು ತಾಲೂಕಿನ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆಯ ವತಿಯಿಂದ ಮದ್ದೂರು ತಾಲೂಕಿನ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಗೀತಾ ರವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತಾಡಿದ ತಂಬಾಕಿನಿಂದ ಬರುವಂತಹ ಕಾಯಿಲೆಗಳ ಬಗ್ಗೆ ಮಾಹಿತಿ ನೀಡಿದರು, ಮಕ್ಕಳನ್ನು ತಂಬಾಕಿನಿಂದ ದೂರ ಉಳಿಸಿ ಅವರ ಆರೋಗ್ಯ ನಮ್ಮ ಕೈಯಲ್ಲಿದೆ ಎಂಬುದರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಅಂಬರಲ್ಲಿ ಸ್ವಾಮಿಯವರು ಮಾತನಾಡಿ ತಂಬಾಕು ಹೇಗೆ ಉತ್ಪತ್ತಿ ಆಗುತ್ತದೆ ಹಾಗೂ ಅದನ್ನು ಹೇಗೆ ಬಳಸುತ್ತಾರೆ ಎಂಬುದರ ಬಗ್ಗೆ ಮಾಹಿತಿ ನೀಡಿದರು. ವರ್ಷದಲ್ಲಿ ತಂಬಾಕು ಎಂಟು ಸಾವಿರ ಕೋಟಿ ಆದಾಯವನ್ನು ತಂದರೆ ಅದನ್ನು ತಿಂದಿರುವ ಮನುಷ್ಯರಿಂದ ಮೂವತ್ತು ಸಾವಿರ ಕೋಟಿ ನಷ್ಟ ಉಂಟಾಗುತ್ತದೆ ಹಾಗೂ ತಂಬಾಕಿನಲ್ಲಿ 370 ವಿಷಕಾರಿ ಅಂಶಗಳಿದ್ದು ಅದನ್ನು ಬಳಸುವುದು ಮನುಷ್ಯನ ದೇಹಕ್ಕೆ ವಿಪರೀತ ಹಾನಿಕರ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಶ್ರೀ ಮುರಳಿಶ್ ರವರು ಮಕ್ಕಳು ಹೇಗೆ ತಂಬಾಕಿನ ಚಟಕ್ಕೆ ಬಲಿಯಾಗುತ್ತಾರೆ ಅದರಿಂದ ಹೇಗೆ ಅವರನ್ನು ಹೊರ ತರಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರು ಶ್ರೀ ಲಿಂಗೇಗೌಡ ರವರು ಅವರ ಮನೆಯಲ್ಲಿ ತಂಬಾಕಿನಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಹಾಗೂ ಅದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವ ಪರಿಹಾರಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಯೋಜನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.