ಬೆಂಗಳೂರು ಪ್ರಾದೇಶಿಕ ವಿಭಾಗದ ತುಮಕೂರು-2 ಜಿಲ್ಲೆಯ ಮಧುಗಿರಿ-2 ತಾಲೂಕಿನ ಬಡವನಹಳ್ಳಿ ವಲಯದ ಶ್ರೀ ಕನ್ನಿಕಾ ಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ 1839 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಡವನಹಳ್ಳಿ ಪೊಲೀಸ್ ವೃತ್ತ ನಿರೀಕ್ಷಕರಾದ ಶ್ರೀ ಕಾಂತ ರೆಡ್ಡಿ ರವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಸಮಾರಂಭದ ದಿವ್ಯ ಸಾನಿದ್ಯವನ್ನು ಶ್ರೀ ಶ್ರೀ ಶ್ರೀ ಡಾ.ಹನುಮಂತನಾಥ ಸ್ವಾಮೀಜಿರವರು ಕುಂಚಿಟಿಗರ ಮಹಾ ಸಂಸ್ಥಾನ ಮಠ ಎಲೆ ರಾಂಪುರ ಕೊರಟಗೆರೆ ತಾಲ್ಲೂಕು ಶ್ರೀಗಳವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಹಾಗೂ ಮದ್ಯವರ್ಜನ ಶಿಬಿರದ ಮೂಲಕ ಸಮಾಜಕ್ಕೆ ಅಗಣೀಯವಾದ ಕೊಡುಗೆಯನ್ನು ನೀಡಿದ್ದಾರೆಂದು ತಿಳಿಸುವ ಮೂಲಕ ಶಿಬಿರಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಶುಭಾಶಿರ್ವಾದ ನುಡಿಗಳ ಮೂಲಕ ಆಶೀರ್ವಚನವನ್ನು ನೀಡಿದರು.
