ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ಇದರ ಆಶ್ರಯದಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕರಾದ ಶ್ರೀ ಪ್ರಹ್ಲಾದ್ ಶೆಟ್ಟಿ ರವರು ದೀಪ ಬೆಳಗಿಸುವ ಮೂಲಕ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಗಳು ಮತ್ತು ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ದುಶ್ಚಟ ಮುಕ್ತ ಸಮಾಜ ಹಾಗೂ ಸ್ವಾಸ್ಥ್ಯ ಸಮಾಜದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸಭಾಧ್ಯಕ್ಷತೆಯನ್ನು ಮಾಣಿ ವಲಯದ ಜನಜಾಗೃತಿ ವಲಯಾಧ್ಯಕ್ಷರಾದ ಶ್ರೀ ರಾಜರಾಮ ಶೆಟ್ಟಿಯವರು ವಹಿಸಿದ್ದರು. ಬಂಟ್ವಾಳ ತಾಲೂಕು ಜನಜಾಗೃತಿ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಆಳ್ವ, ಶ್ರೀ ಕಿರಣ್ ಹೆಗಡೆ, ಶ್ರೀ ತನಿಯಪ್ಪ ಗೌಡ, ಡಾಕ್ಟರ್ ಮನೋಹರ್ ರೈ, ತಾಲೂಕು ಯೋಜನಾಧಿಕಾರಿಗಳಾದ ಶ್ರೀ ರಮೇಶ್, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸುಪ್ರಿಯ, ವಲಯ ಒಕ್ಕೂಟದ ಅಧ್ಯಕ್ಷರಾದ ಶ್ರೀ ಸುಧಾಕರ ಸಫಲ್ಯ ಮತ್ತು ಸಹ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
