ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ವೇದಿಕೆಯ ವತಿಯಿಂದ ಅಕ್ಟೋಬರ್ 2 ಗಾಂಧಿ ಜಯಂತಿಯ ಪ್ರಯುಕ್ತ ಪಾನಮುಕ್ತರ ಸಮಾವೇಶ ಮತ್ತು ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನ ಕಾರ್ಯಕ್ರಮ ಇಂದು ಹೊಂಬಾಳಮ್ಮ ಸಮುದಾಯ ಭವನದಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಚಾಮುಂಡಿಬೆಟ್ಟ ಪ್ರಧಾನ ಅರ್ಚಕರಾದ ವೇದಬ್ರಹ್ಮ ಶ್ರೀ ಎನ್ ಶಶಿಶೇಖರ ದೀಕ್ಷಿತ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಮೈಸೂರು ಜಿಲ್ಲೆಯ ಮಹಾಪೌರರಾದ ಮಾನ್ಯ ಶಿವಕುಮಾರ್ ರವರು ಮಧ್ಯವರ್ಜನ ಶಿಬಿರಗಳ ಬಗ್ಗೆ ಉತ್ತಮ ಶ್ಲಾಘನೀಯ ವ್ಯಕ್ತಪಡಿಸಿದರು ಹಾಗೂ ಕಾರ್ಯಕ್ರಮದಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರಿವಸ್ಸರವರು ಕಾರ್ಯಕ್ರಮವನ್ನು ಉದ್ದೇಶಿಸಿ ಶುಭನುಡಿದರು. ಕಾರ್ಯಕ್ರಮದಲ್ಲಿ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರು, ಜಿಲ್ಲಾ ನಿರ್ದೇಶಕರು, ಜನಜಾಗೃತಿ ವೇದಿಕೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, 7 ಜಿಲ್ಲೆಯ ಯೋಜನಾಧಿಕಾರಿಗಳು,ಜನಜಾಗೃತಿ ವೇದಿಕೆ ಯೋಜನಾಧಿಕಾರಿ, MIS ಯೋಜನಾಧಿಕಾರಿ ಉಪಸ್ಥಿತರಿದ್ದರು
