ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಾಮನಗರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಜಾಲಮಂಗಳ ವಲಯ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮದ್ಯವರ್ಜನ ಶಿಬಿರದ ಸಮಾರೋಪ ಕಾರ್ಯಕ್ರಮ ಸರಕಾರಿ ಪದವಿ ಪೂರ್ವ ಕಾಲೇಜ ಜಾಲಮಂಗಲದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿದ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಸಿ ಬಾಲಕೃಷ್ಣ ರವರು ಕಾರ್ಯಕ್ರಮಕ್ಕೆ ಶುಭ ಹಾರೈಕೆ ಮಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ತಹಶೀಲ್ದಾರರಾದ ಶಿವಣ್ಣ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮಹದೇವಯ್ಯ, ವಕೀಲರಾದ ಸುಬ್ಬ ಶಾಸ್ತ್ರಿ, ಜಾಲಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಪದ್ಮ, ಪಂಚಾಯತ್ ಸದಸ್ಯರುಗಳಾದ ಗಂಗಾಧರ್, ನಾಗರಾಜ್, ಜನಜಾಗೃತಿ ವೇದಿಕೆ ಸದಸ್ಯರಾದ ವೇದರಾಜ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ರಾಜು, ತಾಲೂಕು ಯೋಜನಾಧಿಕಾರಿ ಮುರಳಿಧರ, ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಮಾಧವ, ತಾಲೂಕಿನ ಮೇಲ್ವಿಚಾರಕ ಶ್ರೇಣಿಯ ಕಾರ್ಯಕರ್ತರು, ಸೇವಾ ಪ್ರತಿನಿಧಿಗಳು ಹಾಗೂ ಸಂಘದ ಸದಸ್ಯರು ಉಪಸಿತರಿದ್ದರು. ಒಟ್ಟು 65 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು.
