ಯಲಹಂಕ ತಾಲೂಕಿನಲ್ಲಿ 1653 ನೇ ಸಮುದಾಯ ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಯಲಹಂಕ ತಾಲೂಕು ಬೆಂಗಳೂರು ಗ್ರಾಮಾಂತರ / ನಗರ ಜಿಲ್ಲೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ತರಬನಹಳ್ಳಿ, ಪೊಲೀಸ್ ಠಾಣೆ ಸೋಲದೇವನಹಳ್ಳಿ , ಆರೋಗ್ಯ ಇಲಾಖೆ ಹೆಸರಘಟ್ಟ ಮತ್ತು ಚಿಕ್ಕಬಾಣಾವರ, ಸ್ಥಳೀಯ ಗ್ರಾಮ ಪಂಚಾಯಿತಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಹೆಸರಘಟ್ಟ ಮತ್ತು ಶಿವಕೋಟೆ ವಲಯ ಮತ್ತು ಸಮಸ್ತ ಸಂಘ ಸಂಸ್ಥೆಗಳ ಹಾಗೂ ಸಾರ್ವಜನಿಕರ ಸಹಕಾರಗಳೊಂದಿಗೆ ಪರಮಪೂಜ್ಯ ಡಾll ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾll ಹೇಮಾವತಿ ವಿ. ಹೆಗ್ಗಡೆಡೆಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ 1653ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಹನುಮಕ್ಕ ಗಿರಿಯಪ್ಪ ಸಮುದಾಯ ಭವನ ತರಬನಹಳ್ಳಿಯಲ್ಲಿ ಜರುಗಿತು.ಶ್ರೀ ಗಣೇಶ್ ಆಚಾರ್ಯ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಂಗಳೂರು ಪ್ರಾದೇಶಿಕ ವಿಭಾಗ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು.ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ವಿ.ರಾಮಸ್ವಾಮಿ ನಿಕಟಪೂರ್ವ ರಾಜ್ಯಾಧ್ಯಕ್ಷರು ಹಾಗೂ ಗೌರವಾನ್ವಿತ ಟ್ರಸ್ಟಿಗಳು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ ಇವರು ನೆರವೇರಿಸಿ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ಇದುವರೆಗೆ 1652 ಮದ್ಯವರ್ಜನ ಶಿಬಿರಗಳನ್ನು ನಡೆಸಿದ್ದೇವೆ. ಇಷ್ಟು ಶಿಬಿರಗಳಲ್ಲಿ 1,36,000 ಜನರು ನೇರವಾಗಿ ಚಿಕಿತ್ಸೆಯನ್ನು ಪಡೆದು ಇದೀಗ ಪಾನಮುಕ್ತ ಜೀವನವನ್ನು ನಡೆಸುತ್ತಿದ್ದಾರೆ. ಅತೀ ಕಡಿಮೆ ಅವಧಿಯಲ್ಲಿ ಒಬ್ಬ ವ್ಯಸನಿಯನ್ನು ಪರಿವರ್ತನೆ ಮಾಡುವಂತಹ ಸಂಸ್ಥೆ ಈ ಪ್ರಪಂಚದಲ್ಲಿ ಇದ್ದರೆ ಅದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ. ಈ ಸಂಸ್ಥೆಯನ್ನು ಜಗತ್ತಿಗೆ ಲೋಕಾರ್ಪಣೆ ಮಾಡಿದಂತಹ ಪರಮಪೂಜ್ಯ ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರಿಗೆ ಕೃತಜ್ಞತೆಗಳನ್ನು ಸಲ್ಲಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಜಿ ಬೈಲಪ್ಪ ಅಧ್ಯಕ್ಷರು 1653ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ತರಬನಹಳ್ಳಿ ಇವರು ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು.ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಶ್ರೀ ಉಮರಬ್ಬ ಇವರು ಮಾತನಾಡಿ ಸಂಸ್ಥೆಯ ಹುಟ್ಟು, ಬೆಳವಣಿಗೆ, ನಡೆದು ಬಂದ ದಾರಿ ಅಭಿವೃದ್ಧಿಯ ಪಥ ಮತ್ತು ಸಾಧನೆಯ ಪರಿಚಯದೊಂದಿಗೆ ಶುಭಾಶಯವನ್ನು ಕೋರಿದರು.ಶ್ರೀಮತಿ ವೀಣಾ ರಮೇಶ್ ಉಪಾಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ / ನಗರ ಜಿಲ್ಲೆ ಇವರು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀಮತಿ ಕೋಕಿಲ, ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ / ನಗರ ಜಿಲ್ಲೆ, ಶ್ರೀ ಡಿ.ಬಿ ಚಿಕ್ಕವೀರಯ್ಯ ನಿವೃತ್ತ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬೆಂಗಳೂರು ನಗರ ಜಿಲ್ಲೆ, ಶ್ರೀ ವಿಜಯಕುಮಾರ್ ಉಪಾಧ್ಯಕ್ಷರು 1653ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ತರಬನಹಳ್ಳಿ, ಶ್ರೀ ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ನೇತ್ರಾವತಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಇವರುಗಳು ಉಪಸ್ಥಿತರಿದ್ದರು.ತಾಲೂಕಿನ ಎಲ್ಲಾ ಮೇಲ್ವಿಚಾರಕರುಗಳು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ಸ್ಥಳೀಯ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಮತ್ತು ನವಜೀವನ ಸಮಿತಿ ಸದಸ್ಯರುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ಕಾರ್ಯಕ್ರಮವನ್ನು ಶ್ರೀ ರವಿರಾಜ್ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ದೇವನಹಳ್ಳಿ ತಾಲೂಕು ಇವರು ಸ್ವಾಗತಿಸಿ, ಶ್ರೀಮತಿ ಗಂಗಾ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿದ್ಯಾನಗರ ವಲಯ ಇವರು ನಿರ್ವಹಿಸಿ, ಶ್ರೀ ಸುನಿಲ್ ಕುಮಾರ್ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಹೆಸರಘಟ್ಟ ವಲಯ ಇವರು ವಂದಿಸಿದರು.