ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ಪ್ರಥಮ ಸಭೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಯಾದಗಿರಿ ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಯಾದಗಿರಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ಪ್ರಥಮ ಸಭೆಯನ್ನು ವಾಸವಿ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು.ಯಾದಗಿರಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ಮಂಜುನಾಥರವರು ಕಾರ್ಯಕ್ರಮದಲ್ಲಿ ಹಾಜರಿದ್ದ ಸರ್ವರಿಗೂ ಸ್ವಾಗತವನ್ನು ಬಯಸಿದರು.ಕಾರ್ಯಕ್ರಮವನ್ನು ಕಲಬುರ್ಗಿ ಪ್ರಾದೇಶಿಕ ನಿರ್ದೇಶಕರು ದಿನೇಶ್ ಪೂಜಾರಿ. ಜನಜಾಗೃತಿ ವೇದಿಕೆ ಅಧ್ಯಕ್ಷರು ನಾಗರತ್ನ ಅನುಪುರ್ ಹಾಗೂ ಜಿಲ್ಲಾ ಕಾರ್ಯದರ್ಶಿ ವಸಂತ. ಬಿ ಹಾಗೂ ಎಲ್ಲಾ ತಾಲೂಕಿನ ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಹಾಸೀನರಿದ್ದ ಗಣ್ಯಮಾನ್ಯರುಗಳು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಸಭೆಯನ್ನು ಉದ್ಗಾಟನೆಯನ್ನು ನೆರವೇರಿಸಿದರು.ಕಾರ್ಯಕ್ರಮದಲ್ಲಿ ಕಲಬುರ್ಗಿ ಪ್ರಾದೇಶಿಕ ವಿಭಾಗದ ಮಾನ್ಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ದಿನೇಶ್ ಪೂಜಾರಿ ಸರ್ ರವರು ಮಾತನಾಡಿ ಜನಜಾಗೃತಿ ವೇದಿಕೆಯಲ್ಲಿರುವಂತಹ ಗಣ್ಯರ, ಸಾಮಾಜಿಕ ಚಿಂತನೆ ಉಳ್ಳವರು.ವಕೀಲರು. ಮತ್ತು ಹಿರಿಯರ ಸಹಕಾರ ಮತ್ತು ಮಾರ್ಗದರ್ಶನ ಹಾಗೂ ನೀವೆಲ್ಲರೂ ಶ್ರೀಕ್ಷೇತ್ರ ಧರ್ಮಸ್ಥಳದ ಮೇಲಿಟ್ಟಿರುವ ವಿಶ್ವಾಸ ಮತ್ತು ನಂಬಿಕೆ ಹಾಗೂ ಪೂಜ್ಯರ ಮೇಲಿಟ್ಟಿರುವ ಪ್ರೀತಿ ಎಂದು ತಿಳಿಸುವ ಮೂಲಕ ಸಂತಸದ ನುಡಿಗಳನ್ನು ನುಡಿದರು. ಜನಜಾಗೃತಿ ವೇದಿಕೆ ಕಾರ್ಯಕ್ರಮಗಳು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸುವ ಮೂಲಕ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಿದರು.ಯಾದಗಿರಿ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರು ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯದರ್ಶಿಗಳಾದ ಶ್ರೀಯುತ ವಸಂತ್. ಬಿ ಸರ್ ರವರು ಗತಸಭೆಯ ವರದಿಯನ್ನು ಮಂಡಿಸಿದರು.ಯಾದಗಿರಿ ಜಿಲ್ಲಾ ಕಛೇರಿ ವ್ಯಾಪ್ತಿಯ ಯಾದಗಿರಿ, ಸುರಪುರ, ಶಹಾಪುರ , ಜೇವರ್ಗಿ, ಚಿತ್ತಾಪುರ ಯೋಜನಾ ಕಛೇರಿಯ ಯೋಜನಾಧಿಕಾರಿಗಳು ತಮ್ಮ ತಾಲೂಕು ವ್ಯಾಪ್ತಿಯಲ್ಲಿ ನಡೆದ ಜನಜಾಗೃತಿ ಕಾರ್ಯಕ್ರಮಗಳ ವರದಿಯನ್ನು ಮಂಡಿಸಿದರು.
ಕಲಬುರ್ಗಿ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಯೋಜನಾಧಿಕಾರಿಗಳಾದ ಶ್ರೀ ರಾಜೇಶ್ ಕೆ ರವರು ಯಾದಗಿರಿ ಜಿಲ್ಲೆಯ ಜನಜಾಗೃತಿ ವೇದಿಕೆಯ 2025-2026 ನೇ ಕ್ರಿಯಾ ಯೋಜನೆ ವಾರ್ಷಿಕ ಗುರಿಯ ವರದಿ
ವಲಯಕ್ಕೆ ಒಂದರಂತೆ ನವಜೀವನ ಸಮಿತಿಯನ್ನು ಕಡ್ಡಾಯವಾಗಿ ರಚನೆ ಮಾಡಿ ನವಜೀವನ ಸಮಿತಿಗಳ ಅನುಪಾಲನೆಯನ್ನು ಸಮರ್ಪಕವಾಗಿ ನಡೆಸುವ ಕುರಿತು
ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದ ಕುರಿತು ತಾಲೂಕುವಾರು ಕಾರ್ಯಕ್ರಮದ ಕುರಿತು ಚರ್ಚಿಸಲಾಯಿತು ಮಾದಕ ವಸ್ತು ವಿರೋಧ ದಿನಾಚರಣೆ ಕಾರ್ಯಕ್ರಮದ ಕುರಿತು ತಾಲೂಕು ಚರ್ಚಿಸಲಾಯಿತು
ಜಿಲ್ಲೆಯ ಮದ್ಯವರ್ಜನ ಶಿಬಿರ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ ನಾಗರತ್ನ ಅನುಪುರ್ ರವರು ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ನುಡಿಗಳನ್ನು ನುಡಿದರು.ವೇದಿಕೆಯ ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಜನಜಾಗೃತಿ ಸದಸ್ಯರು ಎಲ್ಲಾ ಯೋಜನಾಧಿಕಾರಿಗಳು ಹಾಗೂ ಜಿಲ್ಲಾ ವಿಚಕ್ಷಣಧಿಕಾರಿಗಳು ಉಪಸ್ಥಿತರಿದ್ದರು