ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಯಾದಗಿರಿ ಜಿಲ್ಲೆಯ ಜೇವರ್ಗಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಮತ್ತು , ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಗಾಂಧಿ ಸ್ಮರಣೆ ಮತ್ತು ದುಶ್ಚಟ ವಿರುದ್ದ ಜಾಗೃತಿ ಕಾರ್ಯಕ್ರಮವನ್ನು ಪೂಜ್ಯ ಶ್ರೀ ಮ.ನಿ. ಪ್ರ. ಸಿದ್ದಲಿಂಗ ಮಹಾಸ್ವಾಮಿಗಳು ವಿರಕ್ತ ಮಠ ಯಡ್ರಾಮಿ ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟನೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮಂಜುನಾಥ ಕುಲಕರ್ಣಿ ಊರಿನ ಗಣ್ಯರು ವಹಿಸಿಕೊಂಡಿರುತ್ತಾರೆ, ಮುಖ್ಯ ಅತಿಥಿಗಳಾಗಿ ಶ್ರೀ ಅಶೋಕ್ ಬಡಿಗೇರ್ ಆಪ್ತಸಮಾಲೋಚಕರು ಯಡ್ರಾಮಿ ಪ್ರಶಾಂತ್ ಚೌಹಾಣ್ ಉದಯ ಕಾಲ ಪತ್ರಿಕೆ ಸಂಪಾದಕರು ಯಡ್ರಾಮಿ , ರಾಜೇಶ್. ಕೆ ಯೋಜನಾಧಿಕಾರಿ ಜನಜಾಗೃತಿ ವೇದಿಕೆ ಕಲಬುರಗಿ ಪ್ರಾದೇಶಿಕ ಕಚೇರಿ , ದಿನೇಶ್. ಎನ್ ತಾಲೂಕಿನ ಯೋಜನಾಧಿಕಾರಿಯವರು ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು ಹಾಗೂ ಸೇವಾಪ್ರತಿನಿಧಿಗಳು ಭಾಗವಹಿಸುತ್ತಾರೆ. ಗಾಂಧೀಜಿಯವರಿಗೆ ಪುಷ್ಪ ನಮನ ಮಾಡಿ, ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಸಲಕರಣೆ ವಿತರಿಸಲಾಯಿತು.
