ರಾಣೆಬೆನ್ನೂರು ತುಮ್ಮಿನಕಟ್ಟಿ ವಲಯದ 1700 ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಪ್ರಕಾಶ್ ಕೋಳಿವಾಡ

Janajagurthi Vedike News

ರಾಣೆಬೆನ್ನೂರು ತುಮ್ಮಿನಕಟ್ಟಿ ವಲಯದ 1700 ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಪ್ರಕಾಶ್ ಕೋಳಿವಾಡ, ಪೂಜ್ಯರ ಕಾರ್ಯಕ್ರಮದ ಬಗ್ಗೆ ಬಹಳಷ್ಟು ಮೆಚ್ಚುಗೆಯನ್ನು ವೆಕ್ತ ಪಡಿಸಿ ನವಜೀವನ ಸದಸ್ಯರಿಗೆ ಶುಭ ಹಾರೈಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ರಾಜಣ್ಣ ಮು ಕೊರವಿಯವರು ಶ್ರೀ ಕ್ಷೇತ್ರದಿಂದ ಹಮ್ಮಿಕೊಳ್ಳುವ ಕಾರ್ಯಕ್ರಮಗಳು, ಪೂಜ್ಯರ ಉದ್ದೇಶ, ಮಧ್ಯವರ್ಜನ ಶಿಬಿರದ ಫಲಿತಾಂಶ ಆಯೋಜನೆ ಗಳ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ನಾಗರಾಜ್ ಶೆಟ್ಟಿ ಸರ್, ಸಂತೋಷಕುಮಾರ್ ಪಾಟೀಲ್ ಮಾಜಿ ಜಿಲ್ಲಾ ಪಂಚಾಯತಿ, ಸದಸ್ಯರು, ರವಿಶಂಕರ್ ಬೆಂಕಿ,ಮಾಜಿ ತಾಲೂಕ ಪಂಚಾಯತ್ ಉಪಾಧ್ಯಕ್ಷರು, ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಬಣಕಾರ ಸರ್, ರಾಣೆಬೆನ್ನೂರು ತಾಲೂಕಿನ ಯೋಜನಾಧಿಕಾರಿಗಳಾದ ಮಂಜುನಾಥ ಗೌಡ & ಮಂಜುನಾಥ ಸರ್, ಪ್ರಾದೇಶಿಕ ಕಚೇರಿಯ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳಾದ ಭಾಸ್ಕರ್ N , ಡಾಕ್ಟರ್ ಬಸವರಾಜ ಕೆಲಗಾರ್ ಮಾಜಿ NWKRTC ನಿರ್ದೇಶಕರು, ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಶ್ರೀ ಪ್ರಭುಲಿಂಗ ಸ್ವಾಮೀಜಿ ನವ ಜೀವನ ಸಮಿತಿ ಸದಸ್ಯರಿಗೆ ಶುಭ ಹಾರೈಸಿದರು ಮತ್ತು ಎಲ್ಲಾ ಅನೇಕ ಗಣ್ಯರು ಭಾಗವಹಿಸಿದ್ದರು