ರಾಮನಗರದಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ

Janajagurthi Vedike News

ಸಮಾಜದ ಪಿಡುಗುಗಳಲ್ಲಿ ಮಾದಕ ವ್ಯಸನ ಕೂಡ ಒಂದಾಗಿದ್ದು ಯುವಪೀಳಿಗೆ ಈ ವ್ಯಸನಗಳಿಗೆ ಬಲಿಬಿದ್ದು ನಾಶವಾಗುತ್ತಿದೆ ಎಂದು ರಾಮನಗರ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಅಪ್ಪಣ್ಣ ಯ್ಯ ಖೇದ ವ್ಯಕ್ತಪಡಿಸಿದರು ಅವರು ರಾಮನಗರ ಜಿಲ್ಲೆಯ ಜನಜಾಗೃತಿ ವೇದಿಕೆಯ ವತಿಯಿಂದ ಹಮ್ಮಿಕೊಂಡ ಮಾದಕ ವಸ್ತು ವಿರೋಧಿ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜಿಲ್ಲಾ ನಿರ್ದೇಶಕರಾದ ಶ್ರೀನಿವಾಸ್ ಉಪಸ್ಥಿತರಿದ್ದು ಯೋಜನೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಈದಿನ ಹಮ್ಮಿಕೊಂಡ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ಕಾರ್ಯಕ್ರಮದಲ್ಲಿ ನಗರಸಭಾ ಕೌನ್ಸಿಲರ್ ಗಳು ಜನಜಾಗೃತಿ ವೇದಿಕೆಯ ಸದಸ್ಯರುಗಳು ಹಾಗೂ ನವಜೀವನ ಸದಸ್ಯರು ಉಪಸ್ಥಿತರಿದ್ದರು.