ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜನಜಾಗೃತಿ ಸಮಾವೇಶ ಕಾರ್ಯಕ್ರಮ

Janajagurthi Vedike News

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜನಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ಸರಕಾರಿ ಪ್ರೌಢಶಾಲೆ ಶ್ರೀಪತಿ ಹಳ್ಳಿಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀಯುತ ಚಿಕ್ಕಣ್ಣಯ್ಯ ಇವರು ದೀಪ ಬೆಳಗಿಸಿ ಉದ್ಘಾಟನೆಯನ್ನು ನೆರವೇರಿಸಿ ಪೂಜ್ಯರು ಕೈಗೊಳ್ಳುವ ಸಮಾಜಮುಖಿ ಕಾರ್ಯ ಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇಂಥಹ ಕಾರ್ಯಕ್ರಮಗಳ ಮೂಲಕ ಜನರಲ್ಲಿರುವಂತಹ ದುಶ್ಚಟವನ್ನು ದೂರ ಮಾಡಿ ನೆಮ್ಮದಿಯ ಜೀವನವನ್ನು ಕಾಣಬೇಕೆಂದು ಶುಭಹಾರೈಸಿದರು . ಜನಜಾಗೃತಿ ಕಾರ್ಯಕ್ರಮದ ಮೈಸೂರು ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ಶ್ರೀಯುತ ಭಾಸ್ಕರ್ ಇವರು ದುಶ್ಚಟಗಳಿಂದ ಆಗುವ ಪರಿಣಾಮಗಳ ಕುರಿತು ಮಾಹಿತಿ ನೀಡಿದರು . ನವಜೀವನ ಸಮಿತಿಯ ಸದಸ್ಯರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರು,ಜನಜಾಗೃತಿ ಜಿಲ್ಲಾ ವೇದಿಕೆಯ ಸದಸ್ಯರಾದ ಶ್ರೀಯುತ ಕೃಷ್ಣಪ್ಪ ,ಒಕ್ಕೂಟದ ಪದಾಧಿಕಾರಿಗಳು ,ಶಾಲೆಯ ಮುಖ್ಯಗುರುಗಳು ಉಪಸ್ಥಿತರಿದ್ದರು .