ಲಿಂಗಸುಗೂರು 1774ನೇ ಮದ್ಯವರ್ಜನ ಶಿಬಿರ ಉದ್ಘಾಟನೆ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಲಿಂಗಸುಗೂರು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಯಂಮ ಮಂಡಳಿ ಬೆಂಗಳೂರು, ಜಿಲ್ಲಾ ಜನಜಾಗೃತಿ ವೇದಿಕೆ ರಾಯಚೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಲಿಂಗಸುಗೂರು, ಪುರಸಭೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಲಿಂಗಸುಗೂರು, ಆರಕ್ಷಕ ಠಾಣೆ ಲಿಂಗಸುಗೂರು, ಕಾರ್ಯನಿರತ ಪತ್ರಕರ್ತರ ಸಂಘ ಲಿಂಗಸುಗೂರು, ಲಯನ್ಸ್ ಕ್ಲಬ್ ಲಿಂಗಸುಗೂರು, ಕರ್ನಾಟಕ ರಕ್ಷಣಾ ವೇದಿಕೆ(ರಿ.) ಲಿಂಗಸಗೂರು, ಸ್ಥಳೀಯ ಶಿಕ್ಷಣ ಸಂಸ್ಥೆಗಳು, ಸಂಘ ಸಂಸ್ಥೆಗಳು, ದಾನಿಗಳು ಹಾಗೂ ಸಾರ್ವಜನಿಕರ ಸಹಕಾರ ಮತ್ತು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕರಡಕಲ್ ಮತ್ತು ಲಿಂಗಸುಗೂರು ವಲಯ ಇವರುಗಳ ಸಹಕಾರದೊಂದಿಗೆ ಪರಮ ಪೂಜ್ಯ ಪದ್ಮವಿಭೂಷಣ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ.ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಜರುಗುವ 1774ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ಸಾಂಸ್ಕೃತಿಕ ಭವನ ಪುರಸಭೆ ಲಿಂಗಸುಗೂರು ಇಲ್ಲಿ ನೆರವೇರಿತು. ಷ. ಬ್ರ. ಶ್ರೀ ಅಮರೇಶ್ವರ ಗುರು ಅಭಿನವ ಗಜದಂಡ ಶಿವಾಚಾರ್ಯ ಮಹಾಸ್ವಾಮಿಗಳು ಬೃಹನ್ಮಠ ದೇವರಭೂಪೂರ ಇವರು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಆಶೀರ್ವಚನವನ್ನು ನೀಡಿದರು. ಶ್ರೀ ಮೌಲಾನ ಸೈಯದ್ ಅಬು ಸೈಯದ್ ಧರ್ಮ ಗುರುಗಳು ಲಿಂಗಸುಗೂರು ಇವರು ವಿಶೇಷ ಮುಖ್ಯ ಅತಿಥಿಗಳಾಗಿ ಆಶೀರ್ವಚನವನ್ನು ನೀಡಿದರು.