ವಿಚಾರಣಾ ಖೈದಿಗಳಿಗೆ ಮನಃಪರಿವರ್ತನಾ ಕಾರ್ಯಕ್ರಮ ತುಮಕೂರು ಜಿಲ್ಲಾ ಕಾರಾಗೃಹದಲ್ಲಿ

Janajagurthi Vedike News

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಕಾರಾಗೃಹ ಜಿಲ್ಲಾ ವಕೀಲರ ಸಂಘ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ತುಮಕೂರು ಜಿಲ್ಲೆಯ ಜಿಲ್ಲಾ ಕಾರಾಗೃಹದ ಖೈದಿಗಳಿಗೆ ಅಂತರಾಷ್ಟ್ರೀಯ ತಂಬಾಕು ವಿರೋಧಿ ದಿನಾಚರಣೆಯ ಪ್ರಯುಕ್ತ ಮದ್ಯಪಾನ ಮತ್ತು ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಮತ್ತು ತಡೆಗಟ್ಟುವಿಕೆ ಕುರಿತು ಜಾಗೃತಿ ಮತ್ತು ಕಾನೂನು ಅರಿವು ಕಾರ್ಯಕ್ರಮ ಕಾರಗೃಹ ಅಧೀಕ್ಷಕರಾದ ಶ್ರೀಮತಿ ಶಾಂತಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ರಾಘವೇಂದ್ರ ಶೆಟ್ಟಿಗಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ತುಮಕೂರು ಇವರು ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ಸರ್ ರವರು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ವಿ ರಾಮಸ್ವಾಮಿಯವರು, ಬೆಂಗಳೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಶೀನಪ್ಪ M, ಜಿಲ್ಲಾಧ್ಯಕ್ಷರಾದ ಪ್ರೆಸ್ ರಾಜಣ್ಣ, ಜಿಲ್ಲಾ ನಿರ್ದೇಶಕರಾದ ಶ್ರೀಮತಿ ದಯಾಶೀಲರವರು,ಜಿಲ್ಲಾ ವೇದಿಕೆ ಉಪಾಧ್ಯಕ್ಷರಾದ ಅಮರನಾಥ್ ಶೆಟ್ಟಿ, ಜಿಲ್ಲಾ ವಕೀಲರ ಸಂಘ ದ ಅಧ್ಯಕ್ಷರಾದ ದೊಡ್ಮನಿ ಗೋಪಾಲಗೌಡರು, ಪ್ರಧಾನ ಕಾರ್ಯದರ್ಶಿಗಳಾದ ಹಿಮಾನಂದ್ ರವರು, ಜಿಲ್ಲಾ ಕಾರಾಗೃಹದ ಪ್ಯಾನಲ್ ವಕೀಲರಾದ ಶ್ರೀ ಗಣೇಶ್ ಪ್ರಸಾದ್, ಜಿಲ್ಲಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಡಾ. ಸಂಜಯ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ಪ್ರಾದೇಶಿಕ ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯ, ಮೇಲ್ವಿಚಾರಕರಾದ ರಾಜೇಶ್ ರವರು ಹಾಗೂ ಜಿಲ್ಲಾ ಕಾರಾಗೃಹದ ಎಲ್ಲಾ ಅಧಿಕಾರಿ ವರ್ಗದವರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.