ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ 1853 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಜಿಲ್ಲಾ ಜನಜಾಗೃತಿ ವೇದಿಕೆ ವಿಜಯನಗರ, ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಕೂಡ್ಲಿಗಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗಡೆಯವರು ಹಾಗೂ ಮಾತೃಶ್ರೀ ಡಾ| ಹೇಮಾವತಿ ಅಮ್ಮನವರ ಕೃಪಾಶೀರ್ವಾದದೊಂದಿಗೆ 1853 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಷ. ಬ್ರ. ಪ್ರಶಾಂತ ಸಾಗರ ಶಿವಾಚಾರ್ಯ ಮಹಾಸ್ವಾಮಿಜಿಗಳು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಈ ಪುಣ್ಯ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಅಮಲಿನಿಂದ ಹೊರಬಂದು ಹೊಸ ಜೀವನ ರೂಪಿಸಿಕೊಳ್ಳುವಂತೆ ಆಶೀರ್ವದಿಸಿದರು. ಕಾರ್ಯಕ್ರಮದ ಉದ್ಘಾಟನೆ ಮಾಡಿದ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕಾವಲಿ ಶಿವಪ್ಪ ನಾಯಕ ಇವರು 8 ದಿನ ನಡೆಯುವ ಶಿಬಿರದಲ್ಲಿ ಪ್ರತಿಯೊಬ್ಬರು ಮಾಹಿತಿ ಪಡೆದುಕೊಂಡು ಉತ್ತಮ ನಾಗರಿಕರಾಗಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಬಣಕಾರ್ ವೀರಣ್ಣ ಇವರು ವಹಿಸಿದ್ದು ಕಾರ್ಯಕ್ರಮಕ್ಕೆ ಮತ್ತು ಎಲ್ಲ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು, ಮದ್ಯವರ್ಜನ ಶಿಬಿರದ ಗೌರವಧ್ಯಕ್ಷರು, ಉಪಾಧ್ಯಕ್ಷರುಗಳು, ಗೌರವ ಸಲಹೆಗಾರರು, ಜಿಲ್ಲಾ ನಿರ್ದೇಶಕರು, ಕಾರ್ಯಕ್ರಮಕ್ಕೆ ಸಹಕಾರ ನೀಡಿದ ತಾಲೂಕಿನ ಅನೇಕ ಗಣ್ಯರು, ವಕೀಲರು, ಉದ್ಯಮಿಗಳು, ಪತ್ರಕರ್ತರು, ಮಾದ್ಯಮದವರು, ಜನಜಾಗೃತಿ ಯೋಜನಾಧಿಕಾರಿಗಳು, ಕ್ಷೇತ್ರ ಯೋಜನಾಧಿಕಾರಿಗಳು, ಅನೇಕ ಸಂಘ ಸಂಸ್ಥೆಯ ಮುಖ್ಯಸ್ಥರುಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಯೋಜನೆಯ ಮೇಲ್ವಿಚಾರಕ ಶ್ರೇಣಿಯ ಕಾರ್ಯಕರ್ತರು, ಸೇವಾಪ್ರತಿನಿಧಿಗಳು, ನವಜೀವನ ಸಮಿತಿಯ ಸ್ವಯಂ ಸೇವಕರು ಉಪಸ್ಥಿತರಿದ್ದರು.