ವಿಜಯಪುರ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike News

ವಿಜಯಪುರ ಜಿಲ್ಲೆ ಜಿಲ್ಲಾ ಜನಜಾಗೃತಿ ವೇದಿಕೆ ಸಭೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ನಡೆಸಲಾಯಿತು ಜಿಲ್ಲಾ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಸೋಮಣ್ಣ ಗೌಡ ಪಾಟೀಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು ಈ ಸಂದರ್ಭದಲ್ಲಿ ಜನಜಾಗೃತಿ ಕಾರ್ಯಕ್ರಮಗಳ ಅನುಷ್ಠಾನ ನವ ಜೀವನ ಸಮಿತಿಯ ಬಲವರ್ಧನೆ. ಅಕ್ಟೋಬರ್ 2 ಕಾರ್ಯಕ್ರಮದ ಕುರಿತಂತೆ ವಿಸ್ತಾರವಾಗಿ ಚರ್ಚೆ ನಡೆದು ನಿರ್ಣಯ ಕೈಗೊಳ್ಳಲಾಯಿತು ಹಾಗೂ ಜನಜಾಗೃತಿ ವೇದಿಕೆ ಸದಸ್ಯರುಗಳಿಗೆ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಕಲ್ಪಿಸಲಾಯಿತು.ಜಿಲ್ಲಾ ನಿರ್ದೇಶಕರು ಶ್ರೀ ಸಂತೋಷ ಕುಮಾರ್ ಸರ್ ಸಭೆಯನ್ನು ಉತ್ತಮ ರೀತಿಯಲ್ಲಿ ಸಂಘಟಿಸಿ ಸಂದರ್ಭದಲ್ಲಿ ಪೂರಕವಾಗಿ ಮಾಹಿತಿ ನೀಡಿದರು.ಪ್ರಾದೇಶಿಕ ಕಚೇರಿಯ ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು *ರಾಜೇಶ್ ಕೆ ಜಿಲ್ಲೆಯ ಎಲ್ಲಾ ಕ್ಷೇತ್ರ ಯೋಜನಾಧಿಕಾರಿಗಳು. ಜನಜಾಗೃತಿ ವೇದಿಕೆ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು