ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಹಾವೇರಿ ಅಗಡಿ ವಲಯದ ಗಾಂಧಿಪುರ ಕಾರ್ಯಕ್ಷೇತ್ರದ ಪದವಿ ಕಾಲೇಜಿನಲ್ಲಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಧರ್ಮಸ್ಥಳದ ವತಿಯಿಂದ ಗಾಂಧಿಪುರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಶ್ರೀಮತಿ ದಯಶೀಲ ಪ್ರಾದೇಶಿಕ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಧಾರವಾಡ ಇವರು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ವಿಚಾರಗಳು ಮತ್ತು ವೈಯಕ್ತಿಕ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಸಂಗತಿಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದಂತಹ ಶ್ರೀ ಭಾಸ್ಕರ್ ಯೋಜನಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಧಾರವಾಡ,ಯೋಜನೆಯ ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಶ್ರೀಯುತ ಶಿವರಾಯ ಪ್ರಭು ತಾಲೂಕಿನ ಯೋಜನಾಧಿಕಾರಿಗಳು ಶ್ರೀಯುತ ಶ್ರೀಮೂರ್ತಿ ಶೆಟ್ಟಿ ಕಾರ್ಯಪ್ರಥಮ ದರ್ಜೆ ಕಾಲೇಜು ಗಾಂಧಿಪುರ ಕಾಲೇಜಿನ ಪ್ರಾಂಶುಪಾಲರು ಅಧ್ಯಕ್ಷತೆ ವಹಿಸಿಕೊಂಡಿರುವ ಶ್ರೀ ಮಾಲತೇಶ್ ಹಾಗೂ ಉಪನ್ಯಾಸಕರು ಹಾವೇರಿ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ನಿಜಲಿಂಗಪ್ಪ ಬಸಗಣ್ಣಿ ಉಪಸಿತರಿದ್ದರು.
