ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಮನಗರ ಮತ್ತು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ರಾಮನಗರ ಜಿಲ್ಲೆ ಇದರ ವತಿಯಿಂದ ಬೆಳಗುಂಬ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಜನಜಾಗತಿ ವೇದಿಕೆ ಅಧ್ಯಕ್ಷರಾದ ಚಿಕ್ಕಣ್ಣ ಅವರು ನೆರವೇರಿಸಿ ತಂಬಾಕಿನ ಕೆಡುಕು ಸುಖ ಸಂತೋಷಕ್ಕೆ ತೊಡಕು ಎಂಬ ಮಾಹಿತಿ ಕರಪತ್ರವನ್ನು ಬಿಡುಗಡೆ ಮಾಡಿದರು ಜನಜಾಗೃತಿ ವೇದಿಕೆ ಕಾರ್ಯಕ್ರಮ ಮತ್ತು ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ದೇಶ ಬಗ್ಗೆ ಮಾಹಿತಿಯನ್ನು ಮಾನ್ಯ ಜಿಲ್ಲಾ ನಿರ್ದೇಶಕರಾದ ಜಯಕರ ಶೆಟ್ಟಿಯವರು ನೀಡಿದರು ಶಾಲೆಯ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯ ದುಷ್ಪರಿಣಾಮ ಬಗ್ಗೆ ಸಂಪನ್ಮೂಲ ವ್ಯಕ್ತಿಯಾದ ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಗಂಗಾಧರ ರವರು ಮಾಹಿತಿ ನೀಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ನಾಗಯ್ಯ ವಹಿಸಿದ್ದರು ಕಾರ್ಯಕ್ರಮದಲ್ಲಿ ಊರಿvನ ಗಣ್ಯರು ಶಾಲಾಭಿವೃದ್ಧಿ ಸಮಿತಿ ಸದಸ್ಯರು ತಾಲೂಕ ಯೋಜನಾಧಿಕಾರಿಗಳು ಕಸ ವಲಯದ ಮೇಲ್ವಿಚಾರಕರು ಮತ್ತಿತರರು ಉಪಸ್ಥಿತರಿದ್ದರು.
