ಉಡುಪಿ ಪ್ರಾದೇಶಿಕ ವಿಭಾಗದ ಶಿರಸಿ ಜಿಲ್ಲಾ ವ್ಯಾಪ್ತಿಯ ಶಿಕಾರಿಪುರ ತಾಲೂಕು ಯೋಜನಾ ಕಚೇರಿಯಲ್ಲಿ ಶಿರಸಿ ಜಿಲ್ಲಾ ಮಟ್ಟದ ಜನಜಾಗೃತಿ ವೇದಿಕೆ ತ್ರೈಮಾಸಿಕ ಸಭೆ ನಡೆಯಿತು. ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಕಾಳಿಂಗ ರಾಜ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಸುಭಾಷ್, ಶ್ರೀ ಪ್ರೇಮ್ ಕುಮಾರ್ ಗೌಡ್ರು, ಶ್ರೀ ಲಕ್ಷ್ಮಣ್ ರಾಯ್ಕೆರ್, ಜಿಲ್ಲಾ ವೇದಿಕೆ ಉಪಾಧ್ಯಕ್ಷರಾದ ಶ್ರೀಮತಿ ಗೌರಿ, 6 ತಾಲೂಕಿನ ಜನಜಾಗೃತಿ ಸದಸ್ಯರು, ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
