ಶಿವಮೊಗ್ಗ ತಾಲೂಕಿನಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನೆ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಶಿವಮೊಗ್ಗ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿವಮೊಗ್ಗ ಜಿಲ್ಲೆ ಇವರ ಆಶ್ರಯದಲ್ಲಿ ಪರಮ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರು ಹಾಗೂ ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆ ಯವರ ಮಾರ್ಗದರ್ಶನದೊಂದಿಗೆ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮರಣೆ ಮತ್ತು ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಚಿತ್ರದುರ್ಗ ಪ್ರಾದೇಶಿಕ ವಿಭಾಗ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಶ್ರೀ ಚನ್ನಬಸಪ್ಪ ಜನಪ್ರಿಯ ಶಾಸಕರು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಹಾಗೂ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಮಾನ್ಯ ಶ್ರೀ ಚನ್ನಬಸಪ್ಪ ಶಾಸಕರು ಯಾವ ಸರ್ಕಾರ ಮಾಡದಂತಹ ಕೆಲಸವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳು ಮಾಡುತ್ತಿದ್ದಾರೆ. ಗಾಂಧೀಜಿ ಕಂಡಂತಹ ರಾಮ ರಾಜ್ಯ, ಪಾನಮುಕ್ತ ಸಮಾಜವ ನಿರ್ಮಾಣವನ್ನು ಪೂಜ್ಯರು ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣ, ಹಳ್ಳಿಗಳ ಅಭಿವೃದ್ಧಿ ಹೀಗೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು. ಜಿಲ್ಲಾ ನಿರ್ದೇಶಕರಾದ ಗೌರವಾನ್ವಿತ ಶ್ರೀ ಮುರಳಿಗರ ಶೆಟ್ಟಿ ರವರು ಯೋಜನೆಯ ವಿವಿಧ ಸಾಮಾಜಿಕ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಉದಯ್ ಕುಮಾರ್ ಶೆಟ್ಟಿ ಸದಸ್ಯರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಶಿವಮೊಗ್ಗ ರವರು ಗಾಂಧಿ ಜಯಂತಿ ಆಚರಣೆ ಹಾಗೂ ಗಾಂಧೀಜಿಯವರ ತತ್ವಗಳನ್ನು ಅಳವಡಿಸಿಕೊಂಡರೆ ಉತ್ತಮ, ದೃಶ್ಯಟಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ಸನ್ನು ಕಾಣಬಹುದು. ಮಧ್ಯರಾತ್ರಿ ನಿರ್ಭಯವಾಗಿ ಒಬ್ಬ ಮಹಿಳೆ ಓಡಾಡಿದರೆ ಮಾತ್ರ ಸ್ವತಂತ್ರ ಸಿಕ್ಕಹಾಗೆ. ಗಾಂಧೀಜಿಯವರ ಕಂಡಂತ ಕನಸನ್ನು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಧರ್ಮಸ್ಥಳ ಧರ್ಮಾಧಿಕಾರಿಗಳು ಮಾಡುತ್ತಿದ್ದಾರೆ ಎಂದು ತಿಳಿಸಿದರು. ಶ್ರೀಮತಿ ಮಮತಾ ಶಿವಣ್ಣ ಸದಸ್ಯರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿವಮೊಗ್ಗ, ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಜನಜಾಗೃತಿ ಮೇಲ್ವಿಚಾರಕ, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರು, ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿ ಸದಸ್ಯರು ಹಾಗೂ ಅವರ ಕುಟುಂಬದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.