ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇಲ್ಲಿ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ ಯವರ 75 ನೇ ಜನ್ಮ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ವಿಶೇಷ ಉಪನ್ಯಾಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ. ಪಾಯ್ಸ್ ರವರು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ. ವಹಿಸಿದ್ದರು. ಕಾಲೇಜು ಉಪನ್ಯಾಸಕರು, 230 ವಿದ್ಯಾರ್ಥಿಗಳು ಭಾಗವಹಿಸಿದ್ದರು.
