ಶ್ರೀ ವಿದ್ಯಾವರ್ಧಕ ಸಹಕಾರ ಸಂಯುಕ್ತ ಪದವಿಪೂರ್ವ ಕಾಲೇಜು ಬಾಣಸಂದ್ರದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ತುರುವೇಕೆರೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಪ್ರಾದೇಶಿಕ ಕಚೇರಿ ಬೆಳ್ತಂಗಡಿ ಮತ್ತು ತುಮಕೂರು 1 ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ವಿದ್ಯಾವರ್ಧಕ ಸಹಕಾರ ಸಂಯುಕ್ತ ಪದವಿಪೂರ್ವ ಕಾಲೇಜು ಬಾಣಸಂದ್ರದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ವೇದಿಕೆಯಲ್ಲಿದ್ದ ಗಣ್ಯರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟನೆಯನ್ನು ಮಾಡಿದರು. ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಶ್ರೀ ತಿಮ್ಮಯ್ಯ ನಾಯ್ಕ ರವರು ವಿದ್ಯಾವರ್ಧಕ ಸಹಕಾರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ದುಶ್ಚಟಗಳಿಂದ ಆಗುವಂಥ ಅನಾನುಕೂಲಗಳು ಮತ್ತು ದುಷ್ಪರಿಣಾಮಗಳ ಬಗ್ಗೆ ಸಮಗ್ರವಾಗಿ ತಿಳಿಸಿ ಜನಜಾಗೃತಿ ವೇದಿಕೆಯ ವತಿಯಿಂದ ನಡೆಸುವ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮದ ಉಪಯೋಗವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬದುಕಬೇಕೆಂದು ತಿಳಿಸಿ ಸ್ವಾಸ್ಥ್ಯ ಸಂಕಲ್ಪ ಪ್ರತಿಜ್ಞಾವಿಧಿಯನ್ನು ಬೋಧಿಸಿ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸುರೇಶ್, ಉಪನ್ಯಾಸಕರಾದ ಶ್ರೀ ಮೋಹನ್ ರವರು ಕಾರ್ಯಕ್ರಮದ ಕುರಿತು ಶುಭನುಡಿಗಳನ್ನು ನುಡಿದರು. ತುಮಕೂರು 1 ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರು ಹಾಗೂ ಕಾಲೇಜಿನ ಅಧ್ಯಕ್ಷರಾದ ಶ್ರೀ ರಾಗಿ ರಂಗೇಗೌಡ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ನುಡಿಗಳನ್ನು ನುಡಿದರು. ಕಾರ್ಯಕ್ರಮದಲ್ಲಿ ತುರುವೇಕೆರೆ ಯೋಜನಾ ಕಛೇರಿಯ ಕ್ಷೇತ್ರ ಯೋಜನಾಧಿಕಾರಿ ಶ್ರೀ ಯಶೋಧರ್, ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಮೇಲ್ವಿಚಾರಕ ಶ್ರೀ ದರ್ಶನ್ ಎಂ. ಎಸ್., ಬಾಣಸಂದ್ರ ಒಲೆಯ ಮೇಲ್ವಿಚಾಕರಾದ ಶ್ರೀಮತಿ ಸಿಂಧು, ಬಾಣಸಂದ್ರ ವಲಯದ ಸೇವಾ ಪ್ರತಿನಿಧಿಗಳು ಮತ್ತು ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.