ಮೈಸೂರು ಪ್ರಾದೇಶಿಕ ವಿಭಾಗದ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಸಳೂರು ನಂದೀಶ್ವರ ಸಭಾಭವನದಲ್ಲಿ ನಡೆದ 1853 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಜನಜಾಗೃತಿ ಮೈಸೂರು ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ಶ್ರೀ ಮಾಧವ ನಾಯಕ್ ರವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಜನಜಾಗೃತಿ ಸದಸ್ಯರಾದ ಶ್ರೀ ಉಮನಾಥ ಸುವರ್ಣ, ತಾಲೂಕಿನ ಯೋಜನಾಧಿಕಾರಿ ಶ್ರೀ ಪುರುಷೋತ್ತಮ ಕೆ., ತಾಲೂಕಿನ ಮೇಲ್ವಿಚಾರಕರು, ತಾಲೂಕಿನ ಸೇವಾ ಪ್ರತಿನಿಧಿಗಳು, ತಾಲೂಕಿನ ಶೌರ್ಯ ವಿಪತ್ತು ತಂಡದ ಸದಸ್ಯರು, ನವಜೀವನ ಸಮಿತಿಯ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
