ಮಚ್ಚಿನ ಸರಕಾರಿ ಪ್ರೌಢಶಾಲೆಯ 180 ಮಂದಿ ಒಂಬತ್ತನೇ ಮತ್ತು ಹತ್ತನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಪ್ರಕಾಶ್ ನಾಯಕ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿ ನಂದಿನಿ, ಶ್ರೀ ಪರಮೇಶ್ವರ್, ಮಲ್ಲಿಕಾ, ವಲಯ ಒಕ್ಕೂಟದ ಅಧ್ಯಕ್ಷರಾದ ಶ್ರೀ ಜಯ ಪೂಜಾರಿ, ಜನಜಾಗೃತಿ ವಲಯ ಅಧ್ಯಕ್ಷರಾದ ಶ್ರೀ ಗೋಪಾಲ್ ಪೂಜಾರಿ, ಸತ್ಯನಾರಾಯಣ ಪೂಜಾ ಸಮಿತಿಯ ಶ್ರೀ ಹರ್ಷ ಉಪಸ್ಥಿತರಿದ್ದರು.
