ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ) ಧರ್ಮಸ್ಥಳ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಶಿರಸಿ ಜಿಲ್ಲೆ ಇದರ ಸಹಯೋಗದಲ್ಲಿ ದಿನಾಂಕ 06.10.2023 ರಂದು ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್, ಆವಿನಹಳ್ಳಿಯಲ್ಲಿ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಥಾ ಮತ್ತು ಜಾಗ್ರತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಮಲ್ಲಿಕಾರ್ಜುನ ಹಕ್ರೆ ನಿಕಟಪೂರ್ವ ಅಧ್ಯಕ್ಷರು, ಜಿಲ್ಲಾ ಜನಜಾಗೃತಿ ವೇದಿಕೆ ಶಿರಸಿ ಇವರು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿಗಳಾದ ಶ್ರೀಮತಿ ಶಾಂತಾ ನಾಯಕ್ ರವರು ಸರ್ವರನ್ನು ಸ್ವಾಗತಿಸಿದರು. ಶ್ರೀ ಗೋಪಾಲಕೃಷ್ಣ ಬೇಳೂರು ಸನ್ಮಾನ್ಯ ಶಾಸಕರು ಸಾಗರ ತಾಲೂಕು ಇವರು ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಸಾಮಾಜಿಕ ಸೇವೆಯಲ್ಲಿ ಗ್ರಾಮಾಭಿವೃದ್ಧಿ ಸಂಸ್ಥೆಯು ತೊಡಗಿಸಿರುವ ಕಾರ್ಯವನ್ನು ಪ್ರಶಂಸಿಸಿದರು. ವೇದಿಕೆಯಲ್ಲಿರುವ ಎಲ್ಲಾ ಅತಿಥಿಗಳು ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ನವಜೀವನ ಸಮಿತಿ ಸದಸ್ಯರಿಗೆ ಹೂ ನೀಡಿ ಅಭಿನಂದಿಸಲಾಯಿತು ಹಾಗೂ 3 ಜನ ನವಜೀವನ ಸಮಿತಿ ಸದಸ್ಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇದರ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಗಾಂಧಿ ಸ್ಮೃತಿ ಕಾರ್ಯಕ್ರಮದ ಧ್ಯೇಯೋದ್ದೇಶಗಳು ಹಾಗೂ ಗಾಂಧೀಜಿಯವರ ತತ್ವ ಆದರ್ಶಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮುನ್ನಡೆಸುವ ರೀತಿ ಹಾಗೂ ಕಾರ್ಯವೈಖರಿಯನ್ನು ತಿಳಿಸಿದರು.ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳನ್ನು ಮಾನ್ಯ ಶಾಸಕರು ವಿತರಿಸಿದರು. ಸಾಗರ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾವೇಶದ ಹಕ್ಕೊತ್ತಾಯ ಮತ್ತು ಠರಾವು ಮಂಡನೆ ಮಾಡಿ ಮಾನ್ಯ ಶಾಸಕರಿಗೆ ಮನವಿ ಪತ್ರ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಜೈವಂತ ಪಟಗಾರ ಯೋಜನಾಧಿಕಾರಿ ವಿಪತ್ತು ನಿರ್ವಹಣಾ ಕಾರ್ಯಕ್ರಮ, ಶ್ರೀ ಪರಮೇಶ್ವರ ಕರೂರ ಸಾಹಿತಿಗಳು, ಶ್ರೀ ವಿಠಲ ಪೈ ಉದ್ಯಮಿಗಳು ಶ್ರೀ ದೇವರಾಜ ಕುರುವರಿ, ಶ್ರೀಮತಿ ಕಸ್ತೂರಿ ಸಾಗರ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಶಿರಸಿ ಉಪಸ್ಥಿತಿಯಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಜಯಲಕ್ಷ್ಮಿ ಧರಣೇೆಂದ್ರ ಅದ್ಯಕ್ಷರು ಗ್ರಾ.ಪ.ಆವಿನಹಳ್ಳಿ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಜನಜಾಗೃತಿ ಮೇಲ್ವಿಚಾರಕರು, ತಾಲೂಕಿನ ಎಲ್ಲಾ ಮೇಲ್ವಿಚಾರಕ ಸಿಬ್ಬಂದಿಗಳು,ನವಜೀವನ ಸಮಿತಿ ಸದಸ್ಯರು,ಒಕ್ಕೂಟದ ಅಧ್ಯಕ್ಷರು/ ಪದಾಧಿಕಾರಿಗಳು, ಪ್ರಗತಿ ಬಂಧು/ ಸ್ವ ಸಹಾಯ ಸಂಘದ ಸದಸ್ಯರು, ಸೇವಪ್ರತಿನಿಧಿಯವರು ಉಪಸ್ಥಿತರಿದ್ದರು.
