ಕೊಪ್ಪಳ ಪ್ರಾದೇಶಿಕ ವಿಭಾಗದ ಬಳ್ಳಾರಿ ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಗಾಂಧಿಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಗಾಂಧಿಸ್ಮೃತಿ, ಜನಜಾಗೃತಿ ಜಾಥಾ ಮತ್ತು ಸಮಾವೇಶ ನಡೆಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಷ ಬ್ರ ಸೋಮನಾಥ ಶಿವಾಚಾರ್ಯರು ರಂಭಾಪುರಿ ಶಾಖ ಮಠ ಸಿಂಧನೂರು ವಹಿಸಿದ್ದರು. ಕಾರ್ಯಕ್ರಮ ಉದ್ಘಾಟನೆಯನ್ನು ಸಿಂಧನೂರು ತಾಲೂಕಿನ ಮಾನ್ಯ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ ರವರು ನೆರವೇರಿಸಿ ಕಾರ್ಯಕ್ರಮ ಉದ್ದೇಶಿಸಿ ಯೋಜನೆಯ ಕಾರ್ಯಕ್ರಮದ ಬಗ್ಗೆ, ಜನಪರ ಕಾರ್ಯಕ್ರಮದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೆ. ವಿರೂಪಾಕ್ಷಪ್ಪ ಕೊಪ್ಪಳ ಲೋಕಸಭೆ ಮಾಜಿ ಶಾಸಕರು ವಹಿಸಿದರು. ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಜೆ. ಚಂದ್ರಶೇಖರ್ ರವರು ಕಾರ್ಯಕ್ರಮ ಉದ್ದೇಶಿಸಿ ಆಶಯ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ರೋಹಿತಾಕ್ಷ ರವರು ಉಪಸ್ಥಿತರಿದ್ದರು.
