ಸಿರಿಗೇರಿ ತಾಲೂಕಿನಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ಗಾಂಧಿಸ್ಮೃತಿ ಮತ್ತು ಪಾನಮುಕ್ತ ನವಜೀವನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸಿರಿಗೆರೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಸಹಯೋಗದಲ್ಲಿ ಗಾಂಧಿ ಸ್ಮೃತಿ ಹಾಗೂ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಭರಮಸಾಗರ ಕನ್ನಿಕಾಪರಮೆಶ್ವರಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರತ್ನಮ್ಮರ ಆದ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜಿಲ್ಲಾ ವೇದಿಕೆ ಉಪಾಧ್ಯಕ್ಷರಾದ ಶ್ರೀ ಕೆ. ಅರ್ ಮಂಜುನಾಥ್ ರವರು ನೆರವೇರಿಸಿ ಗಾಂಧಿಜೀಯವರ ತತ್ವಗಳನ್ನು ಅಳವಡಿಸಿಕೊಂಡು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಾದ್ಯಂತ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ ವ್ಯಸನ ಮುಕ್ತ ಕಾರ್ಯಕ್ರಮದೊಂದಿಗೆ, ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪಣತೊಡುವ ಮೂಲಕ ಸರ್ಕಾರವನ್ನು ಕಣ್ತೇರೆಸುವ ಕೆಲಸ ಕಾರ್ಯವನ್ನು ಮಾಡುತ್ತಿದ್ದಾರೆ. ಗಾಂಧೀಜಿ ಕಂಡ ಕನಸು ನನಸಾಗಿಸುವ ನಿಟ್ಟಿನಲ್ಲಿ ಮಹಿಳೆಯರ ರಕ್ಷಣೆ, ಮಹಿಳೆಯರ ಸ್ವಾವಲಂಬಿ ಬದುಕಿಗಾಗಿ ಮತ್ತು ಗ್ರಾಮಗಳ ಸ್ವಚ್ಛತೆಗೆ ಮೂಲಭೂತ ಸೌಕರ್ಯಗಳನ್ನು ಪೂರೈಸುವ ಮಹತ್ಕಾರ್ಯವನ್ನು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಾಡುತ್ತಿದ್ದಾರೆ ಇದು ಬಹಳ ಶ್ಲಾಘನೀಯವಾಗಿದೆ ಎಂದು ಶುಭ ಹಾರೈಸಿದರು. ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಪೂಜಾರಿರವರು ಮಾತನಾಡುತ್ತಾ ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಯೇ ಗ್ರಾಮಾಭಿವೃದ್ಧಿ ಯೋಜನೆ ಇದಕ್ಕೆ ಪೂರಕವಾಗಿ ಪೂಜ್ಯರ ಪರಿಕಲ್ಪನೆಯಂತೆ 42 ವರ್ಷಗಳಿಂದ ಲೋಕ ಕಲ್ಯಾಣಕ್ಕಾಗಿ ಸೇವಾ ಚಟುವಟಿಕೆ ಪೂರಕ ಹಾಗೂ ಮಹಿಳಾ ಆರ್ಥಿಕ ಸಬಲೀಕರಣ, ಸ್ವಸಹಾಯ ಸಂಘಗಳು, ಆರೋಗ್ಯ ಸೇವೆ, ಮಕ್ಕಳ ಶಿಕ್ಷಣ, ಗಾಂಧೀಜಿ ಕಂಡ ಕನಸು ನನಸು ಮಾಡುವ ಕಾರ್ಯವನ್ನು ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಾಡಲಾಗುತ್ತಿದೆ ವ್ಯಸನ ಮುಕ್ತ ಜೀವನ ನಡೆಸಲು ಮಧ್ಯವರ್ಜನ ಶಿಬಿರ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ತಂಬಾಕು ವಿರೋಧಿ ದಿನಾಚರಣೆ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಹಾಗೂ ಆಪತ್ತಿನ ಕಾಲದಲ್ಲಿ ನೆರವಾಗುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಘಟಕವನ್ನು ಜನಜಾಗೃತಿ ವೇದಿಕೆ ಮೂಲಕ ಮಾಡಲಾಗುತ್ತಿದೆ. ಶೈಕ್ಷಣಿಕ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಶಾಲೆಗಳಿಗೆ ಬೆಂಚು ಡೆಸ್ಕ್ ಒದಗಣೆ, ಸುಜ್ಞಾನ ನಿಧಿ ಶಿಷ್ಯವೇತನ, ಜ್ಞಾನ ದೀಪ ಶಿಕ್ಷಕರ ಒದಗಣೆ ಮಾಡುವ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ನವಜೀವನ ಸಮಿತಿ ಸದಸ್ಯರನ್ನು ಅಭಿನಂದಿಸಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀ ರಾಜು ನಾಯ್ಕ, ಶ್ರೀ ಮರುಳಸಿದ್ದಪ್ಪ, ಶಾಂತ, ಶ್ರೀ ಅಶೋಕ್, ರೂಪಾ, ಶ್ರೀ ಜನಾರ್ಧನ್, ಯೋಜನಾಧಿಕಾರಿಗಳಾದ ಶ್ರೀ ಆಶೋಕ್, ಶ್ರೀ ರವಿಚಂದ್ರ, ವಲಯ ಮೆಲ್ವಿಚಾರಕರು, ಜನಜಾಗೃತಿ ಮೆಲ್ವಿಚಾರಕರು, JVK ಸಮನ್ವಧಿಕಾರಿ, ಸೇವಾಪ್ರತಿನಿಧಿ, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಸದಸ್ಯರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.