ಚಿನಕುರಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಗೌರವಾನ್ವಿತ ಜಿಲ್ಲಾ ನಿರ್ದೇಶಕರು ಶ್ರೀ ಮತಿ ಮಮತರಾವ್ ಮೇಡಮ್ ರವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು..ತಂಬಾಕು ಇನ್ನಿತರ ಮಾದಕ ವಸ್ತುಗಳಿಂದ ಆಗುತ್ತಿರುವ ದುಷ್ಪರಿಣಾಮಗಳು ಬಗ್ಗೆ ಇತ್ತೀಚಿನ ದಿನಗಳಲ್ಲಿ ಯುವಪೀಳಿಗೆ ದುಶ್ಚಟಕ್ಕೆ ಬಲಿಯಾಗುತ್ತಿದ್ದು ಇದರಿಂದ ಜೀವನದಲ್ಲಿ ನೆಮ್ಮದಿ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬರುತ್ತಿದೆ ಇದರಿಂದ ಜಾಗೃತರಾಗಿ ದುಶ್ಚಟಕ್ಕೆ ಬಲಿಯಾಗದಂತೆ ಮಾದರಿ ವಿದ್ಯಾರ್ಥಿಯಾಗುವಂತೆ ಮಾರ್ಗದರ್ಶನ ನೀಡಿದರು..
ಸಂಪನ್ಮೂಲ ವ್ಯಕ್ತಿ ಶ್ರೀ ಹೆಚ್. ಆರ್.ಧನ್ಯಕುಮಾರ್ ರವರು ವ್ಯಸನಗಳ ಬಗ್ಗೆ ಅತಿಯಾದ ಮೊಬೈಲ್ ಗೀಳು ,ಪಾನ್ ಗಳು, ನಶೆಬರಿಸುವ ಮಾದಕ ವಸ್ತುಗಳ ಇವು ಇತ್ತೀಚಿನ ದಿನಗಳಲ್ಲಿ ಬಹಳ ಸುಲಭವಾಗಿ ಮಾರುಕಟ್ಟೆ ಯಲ್ಲಿ ಸಿಗುತ್ತಿರುವುದು ಆತಂಕದ ವಿಚಾರವಾಗಿದೆ ,ಅದೇ ರೀತಿಯಲ್ಲಿ ಜಾಹಿರಾತಿನ ಮೋಹಕ್ಕೆ ಬಲಿಬಿದ್ದು ಮಕ್ಕಳು ತಂಪು ಪಾನೀಯಗಳಿಗೆ ಮಾರುಹೋಗುತ್ತಿದ್ದಾರೆ ಇದರೆಲ್ಲದರಿಂದ ಹೊರಬರಬೇಕಾದರೆ ನಮ್ಮ ದೈನಂದಿನ ದಿನಚರಿ ,ಅಭ್ಯಾಸ ಗಳನ್ನು ಬದಲಾಯಿಸಬೇಕು ಎಂದರು.ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಶ್ರೀ ಯಶವಂತ್ ಸರ್ ರವರು. ಶ್ರೀ ಮತಿ ಜಯಶ್ರೀ ಉಪ ಪ್ರಾoಶುಪಾಲರು.. ಸಹ ಶಿಕ್ಷಕರು. ಮೇಲ್ವಿಚಾರಕರು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.
