ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮೂಡಿಗೆರೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಚಿಕ್ಕಮಗಳೂರು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಆಲ್ದೂರು ವಲಯ, ಜ್ಞಾನವಿಕಾಸ ಕೇಂದ್ರಗಳು ಆಲ್ದೂರು ವಲಯ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಆಲ್ದೂರು ಮತ್ತು ಸರ್ಕಾರಿ ಪ್ರೌಢಶಾಲೆ ಆಲ್ದೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾll ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾll ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಈ ವಿಷಯದ ಕುರಿತಂತೆ ದುಶ್ಚಟ ದುರಭ್ಯಾಸದಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ ” ಸ್ವಾಸ್ಥ್ಯ ಸಂಕಲ್ಪ ” ಕಾರ್ಯಕ್ರಮವನ್ನು ನಡೆಸಲಾಯಿತು.
ಶ್ರೀ ಸುರೇಶ್ ಗೌಡ ಅಧ್ಯಕ್ಷರು ಶ್ರೀ ಮಹಾ ಗಣಪತಿ ಸೇವಾ ಸಮಿತಿ ಆಲ್ದೂರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಸುರೇಶ್ ಸಿ.ಎಸ್ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಪ್ರೌಢಾವಸ್ಥೆಯಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಸ್ವ ನಿಗ್ರಹದೊಂದಿಗೆ ಹತೋಟಿಗೆ ತಂದುಕೊಳ್ಳುವುದು ಅನಿವಾರ್ಯತೆ ಇದೆ. ವಿದ್ಯಾರ್ಥಿಗಳೇ ಉತ್ತಮ ಸಮಾಜದ ಆಸ್ತಿ ಎಂದು ಶುಭವನ್ನು ಹಾರೈಸಿದರು.
ಮುಖ್ಯ ಅತಿಥಿಯಾಗಿ ಶ್ರೀ ಸುಧೀರ್ ಜೈನ್ ಕ್ಷೇತ್ರ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮೂಡಿಗೆರೆ ತಾಲೂಕು ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಯ ಹುಟ್ಟು, ಬೆಳವಣಿಗೆ, ಬೆಳೆದು ಬಂದ ಹಾದಿ, ಸಾಧನೆಯ ಕುರಿತು ಮಾತನಾಡಿ ಜನಜಾಗೃತಿ ವೇದಿಕೆಯ ಮೂಲಕ ನಡೆಯುವಂತಹ ಮದ್ಯವರ್ಜನ ಶಿಬಿರ, ಶೌರ್ಯ ಕಾರ್ಯಕ್ರಮ ಹಾಗೂ ಇನ್ನಿತರ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ಶ್ರೀ ನಂದಕುಮಾರ್ ಪಿ ಪಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಇದುವರೆಗೆ ಕರ್ನಾಟಕ ರಾಜ್ಯದ 20, 988 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ನಡೆಸಿ 22 ಲಕ್ಷಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ.ಮತ್ತು ಜನಜಾಗೃತಿ ವೇದಿಕೆಯ ಮುಖೇನ ಸಮುದಾಯದ ಸಹಭಾಗಿತ್ವದೊಂದಿಗೆ ಇದುವರೆಗೆ 1935 ಮದ್ಯವರ್ಜನ ಶಿಬಿರಗಳನ್ನು ನಡೆಸಿ 1 ಲಕ್ಷದ 30 ಸಾವಿರ ಮದ್ಯವ್ಯಸನಿಗಳನ್ನು ವ್ಯಸನಮುಕ್ತಗೊಳಿಸಲಾಗಿದೆ.
ಮಾದಕ ವ್ಯಸನವೆಂಬುದೊಂದು ರೋಗ. ವಿಶ್ವ ಆರೋಗ್ಯ ಸಂಸ್ಥೆಯ ಕಳೆದ ಸಂಶೋಧನೆಯ ಪ್ರಕಾರ ನಮ್ಮ ಭಾರತ ದೇಶದಲ್ಲಿ ಒಂದು ವರ್ಷಕ್ಕೆ 5 ಲಕ್ಷ ಜನರು ಮದ್ಯಪಾನದಿಂದ ಮರಣ ಹೊಂದಿದರೆ 14.5 ಲಕ್ಷ ಜನರು ಮಾದಕ ದ್ರವ್ಯ, ಮಾದಕ ವ್ಯಸನ ಅಥವಾ ಇನ್ನಿತರ ಚಟಗಳಿಂದ ಬಲಿಯಾಗುತ್ತಿರುವುದು ಶೋಚನೀಯವಾಗಿದೆ. ಪ್ರಪಂಚದ ಐದು ಭೀಕರವಾದ ಖಾಯಿಲೆಗಳಲ್ಲಿ ಮಾದಕ ವ್ಯಸನವೂ ಒಂದು ( ಉದಾ : ಕ್ಯಾನ್ಸರ್, ಕ್ಷಯ, ಹೆಚ್.ಐ.ವಿ, ಹೃದಯ ಸಂಬಂಧಿತ ಖಾಯಿಲೆಗಳು, ಮತ್ತು ಮಾದಕ ವ್ಯಸನ ) ವಿದ್ಯಾರ್ಥಿಗಳ ವಯಸ್ಸು ಹದಿಹರೆಯದ ವಯಸ್ಸು. ವಿದ್ಯಾರ್ಥಿ ಜೀವನ ಹಸಿ ಮಣ್ಣಿನ ಮಡಿಕೆ ಇದ್ದ ಹಾಗೆ. ಹೆಚ್ಚು ಸಡಿಲ ಮಾಡಿದರೂ ಹೆಚ್ಚು ಬಿಗಿ ಮಾಡಿದರೂ ಒಡೆಯುವುದು ಮಡಿಕೆಯೆ. ಹದಿಹರೆಯದಲ್ಲಿನ ಒತ್ತಡಗಳು, ತಂದೆ – ತಾಯಂದಿರ ಒತ್ತಡ, ಸ್ನೇಹಿತರ ಒತ್ತಡ, ಜೀವನ ಶೈಲಿ, ಮಾಧ್ಯಮ, ಆರ್ಥಿಕ ಸ್ವಾತಂತ್ರ್ಯ, ಪ್ರೀತಿಯ ಕೊರತೆ, ಅನಾರೋಗ್ಯ, ಪಾಶ್ಚಾತ್ಯ ಸಂಸ್ಕೃತಿ, ಸಾಹಸ ಪ್ರವೃತ್ತಿ, ನಕಾರಾತ್ಮಕ ಚಿಂತನೆಗಳು, ಈ ಎಲ್ಲಾ ಕಾರಣಗಳಿಂದಾಗಿ ಅಮಲು ಪದಾರ್ಥ ಹಾಗೂ ಇನ್ನಿತರ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ.ಸಪ್ತ ವ್ಯಸನಗಳಲ್ಲಿ ಮಾದಕ ವ್ಯಸನ ಮೊದಲ ಮೆಟ್ಟಿಲು ಈ ಮೆಟ್ಟಿಲನ್ನು ಜಾರಿದರೆ ಉಳಿದೆಲ್ಲಾ ಮೆಟ್ಟಿಲುಗಳು ತನ್ನಿಷ್ಟಕ್ಕೆ ಜಾರುತ್ತವೆ. ( ಮಾದಕ ವ್ಯಸನ, ಮಾಂಸ, ಮಾನಿನಿ, ಜೂಜುಜುಗಾರಿ, ಮೃಗವಿಹಾರ, ದಿವಾಸ್ವಪ್ನ ಮತ್ತು ದಿವಾಮೈಥುನ ) ಸಮಾಜದಲ್ಲಿ ವ್ಯಸನಕ್ಕೆ ಬಲಿ ಬಿದ್ದವರಿಗೆ ಅಪಘಾತ, ಆತ್ಮಹತ್ಯೆ ಮತ್ತು ಅಕಾಲಿಕ ಮರಣ ಇವುಗಳು ಸರ್ವೇ ಸಾಮಾನ್ಯ.ಅತಿಯಾದ ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣ ದಿಂದಲೂ ವಿದ್ಯಾರ್ಥಿಗಳ ಮನೋಸ್ಥಿತಿ ಹಾಳಾಗುತ್ತದೆ. ವಿದ್ಯಾರ್ಥಿಗಳು ಇದರ ಬಗ್ಗೆಯೂ ಗಮನ ಹರಿಸಬೇಕು.
ಇವುಗಳಿಂದ ಹೊರಬರಲು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಎಚ್ಚೆತ್ತುಕೊಳ್ಳುವ ಅವಶ್ಯಕತೆಯಿದೆ. ದೃಢ ನಿರ್ಧಾರ, ಸಂಧಾನ ಕೌಶಲ, ರಚನಾತ್ಮಕ ಚಿಂತನೆ, ವಿಮರ್ಶಾತ್ಮಕ ಚಿಂತನೆ, ಸಂವಹನ ಕುಶಲತೆ ವ್ಯಕ್ತಿ – ವ್ಯಕ್ತಿ ಸಂಬಂಧ, ಸಮಯ ಪಾಲನೆ, ನಡತೆ, ಗೌರವ, ಆತ್ಮಸ್ಥೈರ್ಯ, ಸಮಸ್ಯಾ ಪರಿಹಾರ, ಪರಾನುಭೂತಿ, ದೃಢ ನಿಲುವು, ಭಾವ ನಿಯಂತ್ರಣ, ಧನಾತ್ಮಕ ಚಿಂತನೆ, ಕರ್ತವ್ಯ ಪ್ರಜ್ಞೆ, ಮತ್ತು ಪ್ರೀತಿ ವಿಶ್ವಾಸಗಳಿಂದ ಮಾತ್ರ ವ್ಯಸನ ಮುಕ್ತ ಜೀವನವನ್ನು ನಡೆಸಲು ಸಾಧ್ಯ.ಆರೋಗ್ಯವಂತ ಶರೀರವೇ ಆತ್ಮದ ಅರಮನೆ. ಅನಾರೋಗ್ಯವಂತ ಶರೀರವೇ ಆತ್ಮದ ಸೆರೆಮನೆ.
ಆರೋಗ್ಯಪೂರ್ಣ ಸಮಾಜ ಅಥವಾ ದುಶ್ಚಟಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ.ಬಹುತೇಕ ಯುವಜನತೆ ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡೋಣ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ರವಿ ಪಿ.ಎಸ್.ಐ ಪೊಲೀಸ್ ಠಾಣೆ ಆಲ್ದೂರು, ಶ್ರೀಮತಿ ಶ್ರೀದೇವಿ ಕುಮಾರಸ್ವಾಮಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಆಲ್ದೂರು, ಶ್ರೀ ಭರತ್ ಉಪಾಧ್ಯಕ್ಷರು ಗ್ರಾಮ ಪಂಚಾಯಿತಿ ಆಲ್ದೂರು, ಶ್ರೀ ಇಬ್ರಾಹಿಂ ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ ಸರ್ಕಾರಿ ಪ್ರೌಢ ಶಾಲೆ ಆಲ್ದೂರು, ಶ್ರೀಮತಿ ಕಮಲಾಕ್ಷಿ ಮುಖ್ಯ ಶಿಕ್ಷಕರು ಸರ್ಕಾರಿ ಪ್ರಾಥಮಿಕ ಶಾಲೆ ಆಲ್ದೂರು, ಶ್ರೀ ಪರಮೇಶ್ ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ ಸರ್ಕಾರಿ ಪ್ರಾಥಮಿಕ ಶಾಲೆ ಆಲ್ದೂರು, ಶ್ರೀ ಜೋಸೆಫ್ ಪತ್ರಕರ್ತರು ಪ್ರಜಾವಾಣಿ ಪತ್ರಿಕೆ, ಶ್ರೀ ರಾಜೇಶ್ ಪತ್ರಕರ್ತರು ಉದಯವಾಣಿ ಪತ್ರಿಕೆ, ಶ್ರೀ ಕುಮಾರ್ ಕೆ.ಎಲ್ ಪ್ರತಿನಿಧಿ ಶ್ರೀ ಶೌರ್ಯ ವಿಪತ್ತು ನಿರ್ವಹಣಾ ಘಟಕ ಆಲ್ದೂರು ಇವರುಗಳು ಉಪಸ್ಥಿತರಿದ್ದು ಸಂದರ್ಭೋಚಿತವಾಗಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಕೋರಿದರು.ಶ್ರೀಮತಿ ವಿನೋದ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಆಲ್ದೂರು ವಲಯ ಮತ್ತು ಶ್ರೀಮತಿ ಭಾರತಿ ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮೂಡಿಗೆರೆ ತಾಲೂಕು ಇವರು ಕಾರ್ಯಕ್ರಮವನ್ನು ಆಯೋಜಿಸಿದ್ದರು.ಪ್ರೌಢ ಶಾಲೆಯ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗ, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು / ಪದಾಧಿಕಾರಿಗಳು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ಪ್ರೌಢ ಶಾಲೆಯ ಎಂಟು ಮತ್ತು ಒಂಭತ್ತನೇ ತರಗತಿಯ 120 ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.
ಕಾರ್ಯಕ್ರಮವನ್ನು ವಲಯದ ಸೇವಾಪ್ರತಿನಿಧಿಗಳು ಪ್ರಾರ್ಥಿಸಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಭಾರತಿ ನಿರೂಪಿಸಿ, ವಲಯದ ಮೇಲ್ವಿಚಾರಕರಾದ ವಿನೋದ ವಂದಿಸಿದರು.