ಹಗರಿಬೊಮ್ಮನಹಳ್ಳಿಯಲ್ಲಿ 2108ನೇ ಮಧ್ಯವರ್ಜನ ಶಿಬಿರ ಉದ್ಘಾಟನೆ

Janajagurthi Vedike Uncategorized

ಹಗರಿಬೊಮ್ಮನಹಳ್ಳಿಯಲ್ಲಿ 2108ನೇ ಮಧ್ಯವರ್ಜನ ಶಿಬಿರ ಉದ್ಘಾಟನೆ
ಹಗರಿಬೊಮ್ಮನಹಳ್ಳಿ: ತಾಲೂಕಿನ ಶ್ರೀ ಸೇವಾಲಾಲ್ ಸಮುದಾಯ ಭವನದಲ್ಲಿ 2108ನೇ ಮಧ್ಯವರ್ಜನ ಶಿಬಿರವನ್ನು ಶ್ರೀ ಗುರು ಪರಮಪೂಜ್ಯ ಡಾ. ಮಹೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಹಗರಿಬೊಮ್ಮನಹಳ್ಳಿ ಶಾಸಕ ಸನ್ಮಾನ್ಯ ಶ್ರೀ ಕೆ. ನೇಮರಾಜ ನಾಯಕ ಅವರು ಉದ್ಘಾಟಿಸಿದರು.ಶಿಬಿರದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಶಿವಪ್ಪ ನಾಯಕ ಕವಾಲಿ, ಬಳ್ಳಾರಿ ಸೆಂಟ್ರಲ್ ಜೈಲ್ ಡಿವೈಎಸ್‌ಪಿ ಗುಜ್ಜಲ್ ಭೀಮೇಶ್, ವೈದ್ಯಾಧಿಕಾರಿ ಡಾ. ಪ್ರವೀಣ್, ಜೆಡಿಎಸ್ ಜಿಲ್ಲಾಧ್ಯಕ್ಷ ಮೃತ್ಯುಂಜಯ ಬಾದಾಮಿ ಹಾಗೂ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಒಕ್ಕೂಟದ ಅಧ್ಯಕ್ಷರು, ನವಜೀವನ ಸಮಿತಿ ಸದಸ್ಯರು, ಯೋಜನೆಯ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ಯೋಜನಾಧಿಕಾರಿ ಶ್ರೀ ನಾಗೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಯೋಜನಾಧಿಕಾರಿ ಶ್ರೀ ಚಂದ್ರಶೇಖರ್ ಅವರು ಸ್ವಾಗತಿಸಿದರು. ಮೇಲ್ವಿಚಾರಕ ಶ್ರೀ ಪ್ರಭು ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
“ಮದ್ಯವರ್ಜನೆಯ ಮೂಲಕ ಆರೋಗ್ಯಕರ ಹಾಗೂ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಇಂತಹ ಶಿಬಿರಗಳು ಮಹತ್ವದ ಕೊಡುಗೆ ನೀಡುತ್ತವೆ” ಎಂಬ ಆಶಯದೊಂದಿಗೆ ಶಿಬಿರವು ಆರಂಭಗೊಂಡಿತು.