ಹಾವೇರಿ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಹಾವೇರಿ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ ಹಾವೇರಿ ಜಿಲ್ಲಾ ಕಛೇರಿಯ ಸಭಾಭವನದಲ್ಲಿ ನಡೆಯಿತು. ಸಭೆಯ ಉದ್ಘಾಟನೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಕಲ್ಯಾಣ್‌ ಕುಮಾರ್‌ ಶೆಟ್ಟರ್‌ ರವರು ನೆರವೇರಿಸಿ ಜಿಲ್ಲಾ ಜನಜಾಗೃತಿ ವೇದಿಕೆಯ ವತಿಯಿಂದ ನಡೆಸಲಾಗುವ ಮದ್ಯವರ್ಜನ ಶಿಬಿರ, ಸ್ವಾಸ್ಯ್ತ ಸಂಕಲ್ಪ ಕಾರ್ಯಕ್ರಮ, ಮಾಧಕ ವಸ್ತು ವೀರೋದಿ ದಿನಚಾರಣೆ, ವಿಶ್ವ ತಂಬಾಕು ವಿರೋದಿ ದಿನಾಚಾರಣೆ ಕಾರ್ಯಕ್ರಮಗಳ ಮೂಲಕ ಜನರಲ್ಲಿ ದುಶ್ಚಟ ದುರಭ್ಯಾಸಗಳ ದುಶ್ಪರಿಣಾಮಗಳ ಬಗ್ಗೆ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಬಗ್ಗೆ ಪರಿಣಾಮಾಕಾರಿಯಾಗಿ ಕಾರ್ಯಕ್ರಮ ಮಾಡಿ ಅರಿವು ಮೂಡಿಸಬೇಕೆಂದು ತಿಳಿಸಿದರು ಮತ್ತು ಅಕ್ಟೋಬರ್ 2 ಗಾಂಧಿ ಜಯಂತಿ ಕಾರ್ಯಕ್ರಮವನ್ನು ಈಗಾಗಲೇ ಮದ್ಯವರ್ಜನ ಶಿಬಿರಕ್ಕೆ ಸೇರಿ ಪಾನಮುಕ್ತರಾದ ನವಜೀವನ ಸಮಿತಿಯ ಸದಸ್ಯರನ್ನು ಜಿಲ್ಲಾ ಮಟ್ಟದಲ್ಲಿ ಸೇರಿಸಿ ಮಾಡುವುದೆಂದು ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ದಿ ಯೋಜನೆ ಹಾವೇರಿ ಜಿಲ್ಲಾ ನಿರ್ದೇಶಕರಾದ ಶಿವರಾಯ ಪ್ರಭು ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಪರಪೂಜ್ಯ ಡಾ| ಡಿ. ವೀರೆಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯಾದ್ಯಂತ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಹಮ್ಮಿಕೊಂಡ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ನಿಕಟಪೂರ್ವ ಆದ್ಯಕ್ಷರಾದ ಶ್ರೀ ಮುತ್ತಣ್ಣ ಯಲಿಗಾರ, ಕೋಶಾಧಿಕಾರಿ ಶ್ರೀ ಮಂಜುನಾಥ್‌ ಯಲಿವಾಳ, ಸದಸ್ಯರಾದ ಶ್ರೀ ಪ್ರಕಾಶ್‌ ಜಿ. ಶೆಟ್ಟಿ, ಶ್ರೀ ನಿಜಲಿಂಗಪ್ಪ ಬಸೆಗಣ್ಣಿ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.