ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ 2026-27ನೇ ಸಾಲಿನ ದ್ವಿತೀಯ ತ್ರೈಮಾಸಿಕ ಸಭೆ

Janajagurthi Vedike 1

ಹಾಸನ: ಮೈಸೂರು ಪ್ರಾದೇಶಿಕ ವ್ಯಾಪ್ತಿಯ ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ 2026-27ನೇ ಸಾಲಿನ ದ್ವಿತೀಯ ತ್ರೈಮಾಸಿಕದ ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಮಾನ್ಯ ಶ್ರೀ ನವೀನ್ ಚಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಯವರಾದ ಮಾನ್ಯ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ರವರ ಉಪಸ್ಥಿತಿಯಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದಯಾನಂದರವರಿಗೆ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ರಾಜ್ಯ ಕಾರ್ಯದರ್ಶಿಯವರು ನೆರವೇರಿಸಿದರು. ಜಿಲ್ಲಾ ವೇದಿಕೆ ಕಾರ್ಯದರ್ಶಿಯವರಾದ ಶ್ರೀ ಮಹಾಬಲ ಕುಲಾಲ್ ಸರ್ ರವರು ಗತ ಸಭೆಯ ವರದಿಯನ್ನು ಮಂಡಿಸಿದರು.ಮಾನ್ಯ ರಾಜ್ಯ ಕಾರ್ಯದರ್ಶಿಯವರು ಮಾತನಾಡುತ್ತಾ ಕಳೆದ ಐದು ತಿಂಗಳ ಹಿಂದೆ ನಿಧನ ಹೊಂದಿದ ಹಿರಿಯ ಸದಸ್ಯರಾದ ಶ್ರೀ ಸೋಮಶೇಖರ್ ರವರ ಸೇವೆಯನ್ನು ಸ್ಮರಿಸಿದರು.ಮಾಜಿ ಹಾಗೂ ನಿಕಟಪೂರ್ವ ಅಧ್ಯಕ್ಷರುಗಳ ಸೇವೆಯನ್ನು ಶ್ಲಾಘಿಸುತ್ತಾ ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು. ಅಕ್ಟೋಬರ್ 2 ರ ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾ ಮಟ್ಟದ ಕಾರ್ಯಕ್ರಮದ ಆಯೋಜನೆಯ ಮಹತ್ವ, ಪೂಜ್ಯರ ಮಾರ್ಗದರ್ಶನದಲ್ಲಿ ಗಾಂಧೀಜಿಯವರ ತತ್ವಾದರ್ಶಗಳನ್ನು ಪ್ರತಿದಿನ ಜನಜಾಗೃತಿ ವೇದಿಕೆಯ ಮೂಲಕ ಪಾಲಿಸಲಾಗುತ್ತಿದೆ.ಅದರಂತೆ ಈ ವರ್ಷವೂ ಪ್ರತಿ ವರ್ಷದಂತೆ ಜನಜಾಗೃತಿ ವೇದಿಕೆಯ ಮೂಲಕ ರಾಜ್ಯಾದ್ಯಂತ ಗಾಂಧಿ ಜಯಂತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಮಾರ್ಗದರ್ಶನ ಮಾಡಿದರು. ಅಕ್ಟೋಬರ್ 2 ರ ಗಾಂಧಿ ಜಯಂತಿ ಪ್ರಯುಕ್ತ ಹಾಸನ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಹಾಸನದಲ್ಲಿ ಅಕ್ಟೋಬರ್ 03 ರಂದು ನಡೆಸುವ ಬಗ್ಗೆ ತೀರ್ಮಾನಿಸಲಾಯಿತು. ಈ ಬಗ್ಗೆ ತುರ್ತಾಗಿ ಪೂರ್ವತಯಾರಿ ಸಭೆಯನ್ನು ಕರೆಯುವ ಬಗ್ಗೆಯೂ ನಿರ್ಧರಿಸಲಾಯಿತು.ಸಭೆಯಲ್ಲಿ ಜನಜಾಗೃತಿ ವೇದಿಕೆ ಉಪಾಧ್ಯಕ್ಷರುಗಳು, ಕೋಶಾಧಿಕಾರಿಯವರು, ಸದಸ್ಯರು, ಕ್ಷೇತ್ರ ಯೋಜನಾಧಿಕಾರಿಗಳು ಹಾಗೂ ಜನಜಾಗೃತಿ ವೇದಿಕೆ ಯೋಜನಾಧಿಕಾರಿಯವರು ಉಪಸ್ಥಿತರಿದ್ದರು.