ಹಿರೇಕೆರೂರು ತಾಲೂಕಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನವಜೀವನೋತ್ಸವ ಕಾರ್ಯಕ್ರಮವನ್ನು ಇಂದು ಯಶಸ್ವಿಯಾಗಿ ಆಯೋಜಿಸಲಾಯಿತು.ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಮಹೇಂದ್ರ ಬಡಳ್ಳಿ ಅವರು ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ಸಮಾಜದ ಜನರ ಏಳಿಗೆಗೆ ಪ್ರಮುಖ ಕಾರಣವಾಗಿವೆ. ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸೇವಾ ಕಾರ್ಯಗಳು, ಚಿಂತನೆಗಳು ಹಾಗೂ ಸಮಾಜಮುಖಿ ಕಾರ್ಯಕ್ರಮಗಳು ಇಡೀ ರಾಷ್ಟ್ರಕ್ಕೆ ಮಾದರಿಯಾಗಿವೆ ಮತ್ತು ಎಲ್ಲರಿಗೂ ಪ್ರೇರಣೆಯಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ನಿರ್ದೇಶಕರಾದ ಶ್ರೀ ಅಶೋಕ ಸರ್ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ಹಾಗೂ ಸಮಾಜದ ಅಭಿವೃದ್ಧಿಗೆ ಯೋಜನೆಯ ಕೊಡುಗೆಗಳ ಕುರಿತು ಮಾಹಿತಿ ನೀಡಿದರು. ನವಜೀವನ ಸದಸ್ಯರು ಪಾನಮುಕ್ತ ಜೀವನವನ್ನು ಮುಂದುವರಿಸಿಕೊಂಡು, ಉತ್ತಮ ಆರೋಗ್ಯ ಮತ್ತು ಕುಟುಂಬದ ಸಂತೋಷದೊಂದಿಗೆ ಸಮಾಜದಲ್ಲಿ ಮಾದರಿಯಾಗಿ ಬದುಕಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕಂಠಧರ ಅಂಗಡಿ, ಬಸವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಶ್ರೀ ವಿರೂಪಾಕ್ಷಪ್ಪ ಹಂಪಾಳಿ, ಜಿಲ್ಲಾ ಜನಜಾಗೃತಿ ಸದಸ್ಯರಾದ ಶ್ರೀ ಮಂಜಪ್ಪ ಕಣಕೋಟಗಿ ಹಾಗೂ ಶ್ರೀ ಸುಭಾಸ್ ಹದಡೇರ, ಭಜರಂಗದಳ ಸಂಯೋಜಕರಾದ ಶ್ರೀ ಅನಿಲ ಹಲವಾಗಿಲು, ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ಭಾಸ್ಕರ್ ಎನ್., ತಾಲ್ಲೂಕಿನ ಯೋಜನಾಧಿಕಾರಿಗಳಾದ ಶ್ರೀಮತಿ ಸುಮಿತ್ರಾ ಜೈನ್, ಜನಜಾಗೃತಿ ಮೇಲ್ವಿಚಾರಕರಾದ ಶ್ರೀ ಉಮೇಶ್, ಮೇಲ್ವಿಚಾರಕರಾದ ಶ್ರೀ ಪ್ರಶಾಂತ್, ಕೃಷಿ ಮೇಲ್ವಿಚಾರಕರಾದ ಶ್ರೀ ರಮೇಶ್ಸೇರಿದಂತೆ ನವಜೀವನ ಪೋಷಕರು ಹಾಗೂ ಯೋಜನೆಯ ಸಿಬ್ಬಂದಿ ಉಪಸ್ಥಿತರಿದ್ದರು.ಕಾರ್ಯಕ್ರಮವು ನವಜೀವನ ಸದಸ್ಯರಲ್ಲಿ ಆತ್ಮವಿಶ್ವಾಸ, ಆರೋಗ್ಯಕರ ಜೀವನಶೈಲಿ ಹಾಗೂ ಸಮಾಜದ ಬಗ್ಗೆ ಜವಾಬ್ದಾರಿಯ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ನೆರವೇರಿತು.
