ಹುನಗುಂದ ತಾಲೂಕಿನಲ್ಲಿ 1798 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಆಮೀನಗಡ ವಲಯದಲ್ಲಿ
ನಡೆದ 1798 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಕೊಪ್ಪಳ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಶ್ರೀ ನಾಗೇಶ್ ವೈ. ರವರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಶ್ರೀ ಅಶೋಕ್ ಚಿಕ್ಕಗಡೆ, ಜಿಲ್ಲೆಯ ನಿರ್ದೇಶಕರಾದ ಶ್ರೀ ಕೃಷ್ಣ ಟಿ., ಶ್ರೀ ಚೆನ್ನಕೇಶವ, ಯೋಜನಾಧಿಕಾರಿ ಶ್ರೀ ಸಂತೋಷ್, ಒಕ್ಕೂಟದ ಅಧ್ಯಕ್ಷರು, ತಾಲೂಕಿನ ಎಲ್ಲಾ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಶೌರ್ಯ ವಿಪತ್ತು ತಂಡದ ಸದಸ್ಯರು, ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.