ಪರಮಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ 1877 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹೊಸಕೋಟೆ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಹೊಸಕೋಟೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ 1877 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಶ್ರೀ ಡಾ. ಬಿ. ಆರ್ ಅಂಬೇಡ್ಕರ್ ಸಮುದಾಯ ಭವನ ಹೊಸಕೋಟೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಶ್ರೀ ತಿಮ್ಮಯ್ಯ ನಾಯ್ಕ ಜನಜಾಗೃತಿ ವೇದಿಕೆಯ ಹುಟ್ಟು ಮತ್ತು ಬೆಳವಣಿಗೆ ಬಗ್ಗೆ ಹಾಗೂ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸುವ ಮೂಲಕ 1877 ನೇ ಮದ್ಯವರ್ಜನ ಶಿಬಿರದ ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ವೇದಿಕೆಯಲ್ಲಿ ಹಾಜರಿದ್ದ ಗಣ್ಯಮಾನ್ಯರುಗಳು ದೀಪ ಪ್ರಜ್ವಲಿಸುವ ಮೂಲಕ 1877 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಉಮರಬ್ಬ ರವರು ಜನಜಾಗೃತಿ ವೇದಿಕೆಯಿಂದ ನಡೆಸಿಕೊಡುವ ಕಾರ್ಯಕ್ರಮಗಳ ಕುರಿತು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾರ್ವಜನಿಕರ ಅನುಕೂಲಕ್ಕೆ ಹಾಗೂ ಸಮಾಜಕ್ಕೆ ನೀಡುತ್ತಿರುವ ಕೊಡುಗೆಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿ ಮುಖ್ಯ ಅತಿಥಿಗಳ ನುಡಿಗಳನ್ನು ನುಡಿಯುವ ಮೂಲಕ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಿದರು. ಮುಖ್ಯ ಅಥಿತಿಗಳಾಗಿ ಶ್ರೀ ಟಿ. ವೆಂಕಟೇಶ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಶುಭ ನುಡಿಗಳನ್ನು ನುಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾದ ಶ್ರೀ ನರಸಿಂಹರಾಜು, ಸದಸ್ಯರುಗಳಾದ ಶ್ರೀ ಹರೀಶ್, ಶ್ರೀ ಎಂ. ಶಂಕರಪ್ಪ, ಶ್ರೀಮತಿ ಮಮತ, ತಾಲೂಕು ವೈದ್ಯಾಧಿಕಾರಿ ಡಾ| ವೀಣಾ ಎಸ್. ಪಿ. ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಕೆ ನುಡಿಗಳನ್ನು ನುಡಿದರು. 1877 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಎ. ಅಫ್ಸರ್ ರವರು ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ನುಡಿಗಳನ್ನು ನುಡಿದರು. ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ಶ್ರೀ ದಿನೇಶ್ ಮರಾಠಿ, ಆರೋಗ್ಯ ಸಹಾಯಕಿ ಕು. ರಂಜಿತಾ, ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಮೇಲ್ವಿಚಾರಕ ಶ್ರೀ ದರ್ಶನ್ ಎಂ. ಎಸ್., ಹೊಸಕೋಟೆ ಯೋಜನಾ ಕಛೇರಿ ವ್ಯಾಪ್ತಿಯ ಮೇಲ್ವಿಚಾರಕರು, ಆಂತರಿಕ ಲೆಕ್ಕಪರಿಶೋದಕರು, ಜ್ಞಾನವಿಕಾಸ ಸಮನ್ವಯಾಧಿಕಾರಿ, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದ್ದರು.