ಹೊಸಪೇಟೆ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದ ವಿಜಯನಗರ ಜಿಲ್ಲಾ ವ್ಯಾಪ್ತಿಯ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ವಿಶೇಷ ಸಭೆ ಕುಡ್ಲಗಿ ಯೋಜನಾ ಕಛೇರಿಯ ಪ್ರವಾಸಿ ಮಂದಿರದಲ್ಲಿ ನಡೆಯಿತು. ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀಯುತ ಕೆ. ಶಿವಪ್ಪ ರವರು ಮತ್ತು ಮಾನ್ಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಜೆ. ಚಂದ್ರಶೇರ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮಾನ್ಯ ಪ್ರಾದೇಶಿಕ ನಿರ್ದೇಶಕರು ಮಾತನಾಡಿ ಪರಮಪೂಜ್ಯ ಖಾವಂದರ ಆಶಯದಂತೆ ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಜಿಲ್ಲಾ ಜನಜಾಗೃತಿಯು ಉತ್ತಮವಾಗಿ ಸಹಕಾರ ನೀಡುತ್ತಾ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವದಾಗಿ ತಿಳಿಸಿದರು. ವೇದಿಕೆಯ ಕಾರ್ಯದರ್ಶಿಗಳಾದ ಶ್ರೀಯುತ ಸತೀಶ್ ಶೆಟ್ಟಿ ರವರು ವಿಜಯನಗರ ಜಿಲ್ಲೆ ವೇದಿಕೆಯು ವಿಶೇಷ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಮತ್ತು ಪರಿವರ್ತನೆ ಮಾಡುವ ಮಹೋನ್ನತ ಕೆಲಸ ಮಾಡುತ್ತಿರುವ ಕುರಿತು ತಿಳಿಸಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರು, ವೇದಿಕೆ ಸರ್ವ ಪದಾಧಿಕಾರಿಗಳು ಮತ್ತು ಕ್ಷೇತ್ರ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.