154 ನೇ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಹಾಗೂ ನವಜೀವನೋತ್ಸವ ಕಾರ್ಯಕ್ರಮ

Janajagurthi Vedike News

ಕಾರ್ಯಕ್ರಮದಲ್ಲಿ ಪ್ರಥಮದಲ್ಲಿ ಗಾಂಧೀಜಿ ಫೋಟೋಗೆ ಪುಷ್ಪಾರ್ಚನೆ ಮಾಡಿ ದೀಪ ಬೆಳಗಿಸಿ ಉದ್ಘಾಟಕರಾಗಿ ಆಗಮಿಸಿದ ನಿಪ್ಪಾಣಿ ನಗರಸಭೆ ಅಧ್ಯಕ್ಷರಾದ ಜಯವಂತ ಬಾಟ್ಲೆ ಇವರು ಕಾರ್ಯಕ್ರಮ ಉದ್ಘಾಟನೆ ಮಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಅದಕ್ಕೆ ಖುದ್ದಾಗಿ ಭೇಟಿ ನೀಡಿದ್ದು ಅತೀವ ಹರ್ಷ ವ್ಯಕ್ತಪಡಿಸಿ ಸಾಮಾಜಿಕ ನಿಸ್ವಾರ್ಥ ಸೇವೆ ಪೂಜ್ಯರು ಮಾಡುತ್ತಿದ್ದು ಅದಕ್ಕೆ ನಾವೆಲ್ಲರೂ ಕೈ ಜೋಡಿಸೋಣ ಎಂದು ನುಡಿದರು. ಈ ಕಾರ್ಯಕ್ರಮದಲ್ಲಿ ಚಿಕ್ಕೋಡಿ ಜಿಲ್ಲೆಯ ಗೌರವಾನ್ವಿತ ಜಿಲ್ಲ‍ಾ ನಿರ್ದೇಶಕರಾದ ಕೃಷ್ಣ ಟಿ ಸರ್ ಇವರು ಸಭೆಯನ್ನುದ್ದೇಶಿಸಿ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಕಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಅದರಲ್ಲೂ ಮದ್ಯವರ್ಜನ ಶಿಬಿರದಿಂದ ಸಾಕಷ್ಟು ಕುಟುಂಬಗಳು ದುಶ್ಚಟಗಳಿಂದ ಮುಕ್ತರಾಗಿ ಅವರು ಮುಂದೆ ಬಂದು ಸಮಾಜದಲ್ಲಿ ಗುರುತಿಸುವಂತಾಗಿದೆ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಹಾಗೂ ಪ್ರತಿಯೊಬ್ಬರು ದುಶ್ಚಟಗಳಿಂದ ಮುಕ್ತರಾಗಿ ಸ್ವಾವಲಂಬನೆ ಜೀವನ ನಡೆಸುವದಕ್ಕಾಗಿ ಇಂತಹ ಕಾರ್ಯಕ್ರಮಗಳು ನಡೆಯುತ್ತಿದ್ದು ಅದನ್ನು ಪ್ರತಿಯೊಬ್ಬರು ರೂಪಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾದ ನಿಪ್ಪಾಣಿ ಕನ್ಯಾ ಶಾಲೆಯ ಶಿಕ್ಷಕರಾದ ಶ್ರೀಮತಿ ಸ್ನೇಹಲ್ ಪಾಟೀಲ್ (PHD) ಪ್ರತಿಯೊಬ್ಬರು ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಅದು ನಮ್ಮಿಂದ ನಮ್ಮ ಮನೆಯಿಂದ ಪ್ರಾರಂಭವಾಗಬೇಕು ನಮ್ಮ ಮಕ್ಕಳು ಒಳ್ಳೆಯ ಪರಿಸರದಲ್ಲಿ ನಾವು ಬೆಳೆಸಿದರೆ ಮಾತ್ರ ಅದು ಸಾಧ್ಯ ಹಾಗೂ ಆ ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದರು. ಈ ಸಭೆಯಲ್ಲಿ ಮದ್ಯವರ್ಜನ ಶಿಬಿರದಿಂದ ಮದ್ಯಮುಕ್ತರಾಗಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬೆಳೆದು ಗುರುತಿಸಿಕೊಂಡಿರುವ ನವಜೀವನ ಸಮಿತಿಯ ಸದಸ್ಯರನ್ನು ಈ ಸಂದರ್ಭದಲ್ಲಿ ಗುರುತಿಸಿ ಅಭಿನಂದಿಸಲಾಯಿತು. ಈ ಕಾರ್ಯಕ್ರಮದಲ್ಲಿ ಚಿಕ್ಕೋಡಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಲಕ್ಷ್ಮಿ ಮಗದುಮ್ ಗ್ರಾಮ ಪಂಚಾಯಿತಿ ಸದಸ್ಯರಾದ ಸುರೇಶ್ ನಗರ ಸೇವಕರು ತಾಲ್ಲೂಕಿನ ಯೋಜನಾಧಿಕಾರಿಗಳು ಮೇಲ್ವಿಚಾರಕರು ತಾಂತ್ರಿಕ ವರ್ಗದವರು ವಿಪತ್ತು ನಿರ್ವಹಣಾ ಪಡೆ ಸದಸ್ಯರು ನವಜೀವನ ಸಮಿತಿ ಸದಸ್ಯರು ಸೇವಾ ಪ್ರತಿನಿಧಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು