ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕುಜಡ್ಕ ಅಮರ ಸಭಾ ಭವನದಲ್ಲಿ ನಡೆಯುತ್ತಿರುವ 1568 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣಕನ್ನಡ 2 ಜಿಲ್ಲೆಯ ನಿರ್ದೇಶಕರಾದ ಪ್ರವೀಣ್ ಕುಮಾರ್, ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ನಾಗೇಶ್ ಪಿ ಯೋಜನಾಧಿಕಾರಿಗಳು ಸುಳ್ಯ ತಾಲೂಕು, ಶ್ರೀ ತಿಮ್ಮಯ್ಯ ನಾಯ್ಕ್ ಯೋಜನಾಧಿಕಾರಿಗಳು ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ವಿಭಾಗ,ಮೇಲ್ವಿಚಾರಕರಾದ ಸೀತಾರಾಮ,ನವಜೀವನ ಸಮಿತಿ ಸದಸ್ಯರು,ಶೌರ್ಯ ವಿಪತ್ತು ತಂಡದ ಸದಸ್ಯರು,ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
