1573 ನೇ ಸಮುದಾಯ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ತುರುವೇಕೆರೆ ಗ್ರಾಮಾಂತರ ಯೋಜನಾ ಕಛೇರಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಾಯಸಂದ್ರ, ಪ್ರಗತಿಬಂಧು ಸ್ವ-ಸಹಾಯ ಸಂಘ ಸಂಸ್ಥೆಗಳ ಒಕ್ಕೂಟಗಳು, ಸಮಸ್ತ ಸಂಘ ಸಂಸ್ಥೆಗಳು, ಸಾರ್ವಜನಿಕರು ಹಾಗೂ ನವಜೀವನ ಸಮಿತಿಗಳ ಸಹಕಾರದೊಂದಿಗೆ ಪರಮಪೂಜ್ಯ ಡಾll.ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ ಯವರ ಮಾರ್ಗದರ್ಶನದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿಯ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದ ಶ್ರೀ ಮಾತಾಜಿ ಭವನದಲ್ಲಿ 1573ನೇ ಮದ್ಯವರ್ಜನ ಶಿಬಿರ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಸ್ವಾಮಿ ಬೋಧಸ್ವರೂಪನಂದ ಅಧ್ಯಕ್ಷರು ರಾಮಕೃಷ್ಣ ಮಠ, ಮಾದಿಹಳ್ಳಿ ಇವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ರಂಗಪ್ಪ ಗೌರವ ಅಧ್ಯಕ್ಷರು 1573ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಇವರು ನೆರವೇರಿಸಿದರು. ವೇದಿಕೆಯಲ್ಲಿ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ವಿರೂಪಾಕ್ಷ ಅಧ್ಯಕ್ಷರು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಇವರು ವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ದಯಾಶೀಲ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇ.ಧ.ಗ್ರಾ ಯೋಜನೆ (ರಿ) ತುಮಕೂರು-01, ಶ್ರೀಮತಿ ಮಂಗಳಗೌರಮ್ಮ ಅಧ್ಯಕ್ಷರು ಗ್ರಾಮ ಪಂಚಾಯಿತಿ ಮಾಯಸಂದ್ರ, ಶ್ರೀ ಪ್ರಭುಕುಮಾರ್ ಅಧ್ಯಕ್ಷರು ಮಾತಾಜಿ ಭವನ ಮಾಯಸಂದ್ರ, ಶ್ರೀ ಮದನ್ ಕುಮಾರ್ ಉಪಾಧ್ಯಕ್ಷರು ಮಾತಾಜಿ ಭವನ ಮಾಯಸಂದ್ರ, ಶ್ರೀ ಕರಿಬಸವಯ್ಯ ಅಧ್ಯಕ್ಷರು ಎಸ್.ಡಿ.ಎಂ.ಸಿ ಮಾಯಸಂದ್ರ, ಶ್ರೀ ಚಂದ್ರಶೇಖರ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು, ಶ್ರೀ ಗಣೇಶ್ ಆಚಾರ್ಯ ಯೋಜನಾಧಿಕಾರಿ ಜನಜಾಗೃತಿ ವೇದಿಕೆ ಬೆಂಗಳೂರು ಪ್ರಾದೇಶಿಕ ವಿಭಾಗ, ಶ್ರೀ ಯಶೋಧರ ಯೋಜನಾಧಿಕಾರಿ ಶ್ರೀ ಕ್ಷೇ.ಧ.ಗ್ರಾ ಯೋಜನೆ (ರಿ) ತುರುವೇಕೆರೆ ತಾಲೂಕು, ಶ್ರೀಮತಿ ಅನಿತಾ ಶೆಟ್ಟಿ ಯೋಜನಾಧಿಕಾರಿ ಶ್ರೀ ಕ್ಷೇ.ಧ.ಗ್ರಾ ಯೋಜನೆ (ರಿ) ತುರುವೇಕೆರೆ ಗ್ರಾಮಾಂತರ, ಶ್ರೀ ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕುಮಾರಿ ರಂಜಿತಾ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ತಾಲೂಕಿನ ಎಲ್ಲಾ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ನವಜೀವನ ಸಮಿತಿ ಸದಸ್ಯರು ಶಿಬಿರಾರ್ಥಿಗಳು ಹಾಗೂ ಇವರ ಕುಟುಂಬದ ಸದಸ್ಯರು ಭಾಗವಹಿಸಿದ್ದರು.