ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕೊರಟಗೆರೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕೊರಟಗೆರೆ, ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆ ತುಮಕೂರು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಕೊರಟಗೆರೆ ವಲಯ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪರಮಪೂಜ್ಯ ರಾಜರ್ಷಿ ಡಾll.ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾll.ಹೇಮಾವತಿ.ವಿ ಹೆಗ್ಗಡೆಯವರ ಮಾರ್ಗದರ್ಶನಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿಯ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಕೊರಟಗೆರೆಯ ಶ್ರೀ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು 1620ನೇ ಮದ್ಯವರ್ಜನ ಶಿಬಿರ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಮುರಳೀಧರ್ ಹಾಲಪ್ಪ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ತುಮಕೂರು ಇವರು ನೆರವೇರಿಸಿ ಉದ್ಘಾಟನಾ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪ್ರದೀಪ್ ಕುಮಾರ್ ಹೆಚ್.ಎಸ್ ಅಧ್ಯಕ್ಷರು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕೊರಟಗೆರೆ ಇವರು ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು. ಶ್ರೀ ಗಣೇಶ್ ಆಚಾರ್ಯ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಂಗಳೂರು ಪ್ರಾದೇಶಿಕ ವಿಭಾಗ ಇವರು ಕಾರ್ಯಕ್ರಮದ ಕುರಿತು ಪ್ರಸ್ತಾವಿಕ ಮಾತುಗಳನ್ನಾಡಿದರು. ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್.ಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಪರ್ವತಯ್ಯ ಪಿ.ಆರ್ ಬೆಸ್ಕಾಂ ನಿವೃತ್ತ ನೌಕರರು ಕೊರಟಗೆರೆ, ಶ್ರೀ ಟಿ.ಕೆ ಜಗದೀಶ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು-2, ಶ್ರೀ ಜಗದೀಶ್ ಕೆ.ಬಿ ಕಾರ್ಯದರ್ಶಿಗಳು ಶ್ರೀ ಬಸವೇಶ್ವರ ದೇವಸ್ಥಾನ ಕೊರಟಗೆರೆ, ಶ್ರೀಮತಿ ಮಮತಾ ಒಕ್ಕೂಟದ ಅಧ್ಯಕ್ಷರು , ಶ್ರೀ ನಂದಕುಮಾರ್ ಪಿ.ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ಪ್ರೆಸಿಲ್ಲಾ ಡಿ ಸೋಜಾ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಇವರುಗಳು ಉಪಸ್ಥಿತರಿದ್ದರು. ಶ್ರೀ ರತನ್ ಪ್ರಬಂಧಕರು ಯೋಜನಾಕಛೇರಿ ಕೊರಟಗೆರೆ, ಸೇವಾಪ್ರತಿನಿಧಿಗಳು ಕೊರಟಗೆರೆ ವಲಯ, ಹಾಗೂ ಒಕ್ಕೂಟದ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಕಾರ್ಯಕ್ರಮವನ್ನು ಬಾಲಕೃಷ್ಣ.ಎಂ ಯೋಜನಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕೊರಟಗೆರೆ ತಾಲೂಕು ಇವರು ಸ್ವಾಗತಿಸಿ, ಮೇಲ್ವಿಚಾರಕರಾದ ಶ್ರೀ ಸಪ್ಲೆಗೌಡ ಇವರು ನಿರೂಪಿಸಿ, ಶ್ರೀ ರವೀಂದ್ರ.ಬಿ ಮೇಲ್ವಿಚಾರಕರು ಇವರು ವಂದಿಸಿದರು.
