ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಸಹಯೋಗದೊಂದಿಗೆ 189 ನೇ ವಿಶೇಷ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ರವರು ವಿಶೇಷ ಶಿಬಿರವನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಈ ಶಿಬಿರದಲ್ಲಿ ನಡೆಸಲಾಗುವ ಕಾರ್ಯಕ್ರಮದ ಬಗ್ಗೆ, ಈ ಶಿಬಿರದ ಬಗ್ಗೆ ಬದಲಾದ ಸಾಧಕರ ಬಗ್ಗೆ ಹೇಳುವ ಮೂಲಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಡಾ ಮೋಹನ್ ದಾಸ್ ಗೌಡ, ನಿಕಟಪೂರ್ವ ಅದ್ಯಕ್ಯರಾದ ಡಿ.ಎ ರಹಿಮಾನ್, ಆಡಳಿತ ವಿಭಾಗದ ಯೋಜನಾಧಿಕಾರಿ ಶ್ರೀ ಮೋಹನ್ ರವರು ಉಪಸ್ಥಿತರಿದ್ದರು.
