ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬಂಗಾರಪೇಟೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಕೋಲಾರ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬಂಗಾರಪೇಟೆ ವಲಯ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಬಂಗಾರಪೇಟೆ, ನಾಡಪ್ರಭು ಕೆಂಪೇಗೌಡರ ಭವನ ಬಂಗಾರಪೇಟೆ, ನವಜೀವನ ಸಮಿತಿಗಳು ಬಂಗಾರಪೇಟೆ ತಾಲ್ಲೋಕು ಇವರ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ 1957ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ನಾಡಪ್ರಭು ಕೆಂಪೇಗೌಡರ ಭವನ ಬಂಗಾರಪೇಟೆಯಲ್ಲಿ ಜರುಗಿತು.ಶ್ರೀ ಚೇತನ್ ಕುಮಾರ್ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಗಾರಪೇಟೆ ರವರು ಸರ್ವರಿಗೂ ಸ್ವಾಗತವನ್ನು ಬಯಸಿದರು.ಶ್ರೀ ತಿಮ್ಮಯ್ಯ ನಾಯ್ಕ್ ಯೋಜನಾಧಿಕಾರಿ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಬೆಂಗಳೂರು ಇವರು ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.ವೇದಿಕೆಯಲ್ಲಿ ಆಸೀನರಾಗಿದ್ದ ಗಣ್ಯಮಾನ್ಯರು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಕಾರ್ಯಕ್ರಮದ ಉದ್ಗಾಟನೆಯನ್ನು ನೆರವೇರಿಸಿದರು.ಶ್ರೀ ಪಿ. ಶಿವಕುಮಾರ್ ನಿವೃತ್ತ ಉಪ ಪೋಲೀಸ್ ವರಿಷ್ಠಾಧಿಕಾರಿಗಳು ಬಂಗಾರಪೇಟೆ ರವರು ಮಾತನಾಡಿ ಸಮಾಜದಲ್ಲಿ ವ್ಯಸನಕ್ಕೆ ಬಲಿಯಾಗಿ ತನ್ನ ಜೀವ ಮತ್ತು ಜೀವನವನ್ನು ಹಾಳುಮಾಡಿಕೊಳ್ಳುವಂತಹ ವ್ಯಕ್ತಿಗಳ ಮನಃಪರಿವರ್ತನೆ ಮಾಡುವ ಮೂಲಕ ಒಂದು ಕುಟುಂಬವನ್ನು ಕಟ್ಟುವಂತಹ ಪರಿಕಲ್ಪನೆಯ ಮೂಲಕ ಮದ್ಯವರ್ಜನ ಶಿಬಿರಗಳನ್ನು ನಡೆಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ದರ್ಮಾಧಿಕಾರಿಗಳಾದ ಪೂಜ್ಯ ಡಾ.ವೀರೇಂದ್ರ ಹೆಗ್ಗಡೆಯವರ ಕಾರ್ಯಕ್ರಮವು ಸಮಾಜದಲ್ಲಿ ಮಾದರಿಯಾದ ಕಾರ್ಯಕ್ರಮವಾಗಿದೆ ಎಂದು ತಿಳಿಸುವ ಮೂಲಕ ಕಾರ್ಯಕ್ರಮದ ಉದ್ಗಾಟನಾ ನುಡಿಗಳನ್ನು ನುಡಿದರು.ಮುಖ್ಯ ಅತಿಥಿಗಳಾಗಿ ಶ್ರೀ ಶಿವಾನಂದ ಆಚಾರ್ಯ ಗೌರವಾನ್ವಿತ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ಕೋಲಾರ ಜಿಲ್ಲೆ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ಸಂಸ್ಥೆಯು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರುವ ಮೂಲಕ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಿದರು.ಕೋಲಾರ ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ಶ್ರೀ ವಾಸುದೇವರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳು ಸಮಾಜದ ಸ್ವಾಸ್ತ್ಯವನ್ನು ಕಾಪಾಡುವಂತಹ ನಿಟ್ಟಿನಲ್ಲಿ ಪೂಜ್ಯ ಖಾವಂದರು ಶಾಲಾ ಕಾಲೇಜುಗಳಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮಗಳು, ಮದ್ಯ ವ್ಯಸನಿಗಳ ಮನಃಪರಿವರ್ತನೆ ಮಾಡುವಂತಹ ಮದ್ಯವರ್ಜನ ಶಿಬಿರಗಳ ಮೂಲಕ ಸಮಾಜಕ್ಕೆ ತನ್ನದೆ ಆದಂತಹ ಅನನ್ಯ ಕೊಡುಗೆಯನ್ನು ನೀಡಿದ್ದಾರೆಂದು ತಿಳಿಸುವ ಮೂಲಕ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಎಂ.ಜಿ ಪ್ರಕಾಶ್ ಕಾರ್ಯದರ್ಶಿಗಳು ಒಕ್ಕಲಿಗರ ಸಂಘ ಬಂಗಾರಪೇಟೆ, ಶ್ರೀ ಪಲ್ಲವಿ ಮಣಿ ಅಧ್ಯಕ್ಷರು ಕನ್ನಡ ಸಂಘ ಬಂಗಾರಪೇಟೆ, ಶ್ರೀ ವಿ.ಎಸ್ ಚಂದ್ರಶೇಖರ್ ಸದಸ್ಯರು ಜನಜಾಗೃತಿ ವೇದಿಕೆ ಕೋಲಾರ, ಶ್ರೀರಾಮ್ ಉಪಾಧ್ಯಕ್ಷರು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬಂಗಾರಪೇಟೆ, ಶ್ರೀ ಮಂಜುನಾಥ್ ಉಪಾಧ್ಯಕ್ಷರು ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಬಂಗಾರಪೇಟೆ, ಶ್ರೀ ಆನಂದ್ ಉಪಾಧ್ಯಕ್ಷರು ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಬಂಗಾರಪೇಟೆ, ಶ್ರೀ ಶ್ರೀನಿವಾಸ್ ಚೌಡೇಶ್ವರಿ ಎಂಟರ್ಪ್ರೈಸಸ್ ಹುಲಿಬೆಲೆ ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.
ಶ್ರೀ ಎಸ್.ಎನ್ ಸಂಪತ್ ಗೌಡ ಅಧ್ಯಕ್ಷರು 1957ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬಂಗಾರಪೇಟೆ ವಲಯ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ಮಾತುಗಳನ್ನಾಡಿದರು.ಕಾರ್ಯಕ್ರಮದಲ್ಲಿ ಶ್ರೀ ದೇವಿಪ್ರಸಾದ್ ಸುವರ್ಣ ಶಿಬಿರಾಧಿಕಾರಿ. ಕುಮಾರಿ ರಂಜಿತಾ ಆರೋಗ್ಯ ಸಹಾಯಕಿ ಶ್ರೀ ದರ್ಶನ್ ಎಂ. ಎಸ್ ಮೇಲ್ವಿಚಾರಕರು ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಂಗಳೂರು ಇವರು ಉಪಸ್ಥಿತರಿದ್ದರು.ಬಂಗಾರಪೇಟೆ ತಾಲೂಕಿನ ಎಲ್ಲಾ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು / ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ನವಜೀವನ ಸಮಿತಿ ಸದಸ್ಯರುಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ಶ್ರೀಮತಿ ಅನಿತಾ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬಂಗಾರ ಪೇಟೆ ವಲಯ ಇವರು ವಂದಿಸಿದರು.ಶ್ರೀ ಜನಾರ್ಧನ್ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಅಮರಾವತಿ ವಲಯ ಇವರು ಕಾರ್ಯಕ್ರಮದ ನಿರ್ವಹಣೆಯನ್ನು ನಡೆಸಿದರು.
