ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ದೊಡ್ಡಬಳ್ಳಾಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕಂಟನಕುಂಟೆ ವಲಯ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ದೊಡ್ಡಬಳ್ಳಾಪುರ, ಪುಷ್ಪಾಂಡಜ ಮಹರ್ಷಿ ಆಶ್ರಮ ತಪಸೀಹಳ್ಳಿ, ನವಜೀವನ ಸಮಿತಿಗಳು ದೊಡ್ಡಬಳ್ಳಾಪುರ ತಾಲ್ಲೋಕು ಇವರ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ 1972ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ಪುಷ್ಪಾಂಡಜ ಮಹರ್ಷಿ ಆಶ್ರಮ ತಪಸೀಹಳ್ಳಿ ಯಲ್ಲಿ ಜರುಗಿತು.ಶ್ರೀ ಎನ್.ಆರ್ ದಿನೇಶ್ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ದೊಡ್ಡಬಳ್ಳಾಪುರ ರವರು ಸರ್ವರಿಗೂ ಸ್ವಾಗತವನ್ನು ಬಯಸಿದರು.ಶ್ರೀ ತಿಮ್ಮಯ್ಯ ನಾಯ್ಕ್ ಯೋಜನಾಧಿಕಾರಿ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಬೆಂಗಳೂರು ಇವರು ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಆಸೀನರಾಗಿದ್ದ ಗಣ್ಯಮಾನ್ಯರು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಕಾರ್ಯಕ್ರಮದ ಉದ್ಗಾಟನೆಯನ್ನು ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಶ್ರೀ ಉಮರಬ್ಬ ಗೌರವಾನ್ವಿತ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ಸಂಸ್ಥೆಯು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರುವ ಮೂಲಕ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಿದರು.ಶ್ರೀ ನರಸಿಂಹರಾಜು ಉಪಾಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ ರವರು ಮಾತನಾಡಿ ಸಮಾಜದಲ್ಲಿ ವ್ಯಸನಕ್ಕೆ ಬಲಿಯಾಗಿ ತನ್ನ ಜೀವ ಮತ್ತು ಜೀವನವನ್ನು ಹಾಳುಮಾಡಿಕೊಳ್ಳುವಂತಹ ವ್ಯಕ್ತಿಗಳ ಮನಃಪರಿವರ್ತನೆ ಮಾಡುವ ಮೂಲಕ ಒಂದು ಕುಟುಂಬವನ್ನು ಕಟ್ಟುವಂತಹ ಪರಿಕಲ್ಪನೆಯ ಮೂಲಕ ಮದ್ಯವರ್ಜನ ಶಿಬಿರಗಳನ್ನು ನಡೆಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ದರ್ಮಾಧಿಕಾರಿಗಳಾದ ಪೂಜ್ಯ ಡಾ.ವೀರೇಂದ್ರ ಹೆಗ್ಗಡೆಯವರ ಕಾರ್ಯಕ್ರಮವು ಸಮಾಜದಲ್ಲಿ ಮಾದರಿಯಾದ ಕಾರ್ಯಕ್ರಮವಾಗಿದ್ದು ಈ ಮದ್ಯವರ್ಜನ ಶಿಬಿರದಿಂದಾಗಿ ಇಂದು ನಾನು ಸಮಾಜದಲ್ಲಿ ಉತ್ತಮವಾದ ಸ್ಥಾನವನ್ನು ಪಡೆಯುವಂತಾಗಿದೆ ಎಂದು ತಿಳಿಸುವ ಮೂಲಕ ಶುಭ ಹಾರೖಸಿದರು.ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ತಾ.ನ ಪ್ರಭುದೇವ್ ಮಾಜಿ ನಗರಸಭೆ ಅಧ್ಯಕ್ಷರು ಹಾಲಿ ಸದಸ್ಯರು ಅರವಿಂದ ವಿದ್ಯಾಸಂಸ್ಥೆ ಸಂಸ್ಥಾಪಕರು, ಶ್ರೀ ಕೆ.ಮಹಾಲಿಂಗಯ್ಯ ನಿವೃತ್ತ ಕನ್ನಡ ಭಾಷಾ ಶಿಕ್ಷಕರು, ಶ್ರೀ ಧರ್ಮೇಂದ್ರ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು, ಶ್ರೀ ರಮೇಶ್ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು, ಶ್ರೀ ವೆಂಕಟೇಶ್ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು, ಶ್ರೀಮತಿ ವಾಣಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು, ಶ್ರೀಮತಿ ಪುಷ್ಪ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು, ಶ್ರೀಮತಿ ಮಮತ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು, ಶ್ರೀಮತಿ ಶೋಭಾ ರಾಜ್ ಗೋಪಾಲ್ ಗ್ರಾಮ ಪಂಚಾಯತಿ ಅಧ್ಯಕ್ಷರು ಕಂಟನಕುಂಟೆ ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.ಶ್ರೀ ಕೆ.ಎಂ ಕೃಷ್ಣಮೂರ್ತಿ ಅಧ್ಯಕ್ಷರು 1972ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕಂಟನಕುಂಟೆ ವಲಯ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ಮಾತುಗಳನ್ನಾಡಿದರು.ಕಾರ್ಯಕ್ರಮದಲ್ಲಿ ಶ್ರೀ ದೇವಿಪ್ರಸಾದ್ ಸುವರ್ಣ ಶಿಬಿರಾಧಿಕಾರಿ. ಶ್ರೀಮತಿ ಪ್ರೆಸಿಲ್ಲಾ ಡಿ.ಸೋಜಾ ಆರೋಗ್ಯ ಸಹಾಯಕಿ ಶ್ರೀ ದರ್ಶನ್ ಎಂ. ಎಸ್ ಮೇಲ್ವಿಚಾರಕರು ಜನಜಾಗೃತಿ ಪ್ರಾದೇಶಿಕ ವಿಭಾಗ ಇವರು ಉಪಸ್ಥಿತರಿದ್ದರು.ದೊಡ್ಡಬಳ್ಳಾಪುರ ತಾಲೂಕಿನ ಎಲ್ಲಾ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು / ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ನವಜೀವನ ಸಮಿತಿ ಸದಸ್ಯರುಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ಶ್ರೀ ಗಿರೀಶ್ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕಂಟನಕುಂಟೆ ವಲಯ ಇವರು ಕಾರ್ಯಕ್ರಮದ ನಿರ್ವಹಣೆಯನ್ನು ನಡೆಸಿದರು. ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರನ್ನೂ ವಂದಿಸಿದರು.
